ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಂಸ್ಕೃತಿಕ ಕಲೆಗಳಿಗೆ ಉತ್ತೇಜನ ಅಗತ್ಯ. ಕಲಿಕೆ ಒಂದು ಸುದೀರ್ಘ ಪ್ರಕ್ರಿಯೆ, ಪರಿಶ್ರಮ, ಶ್ರದ್ಧೆ ಮತ್ತು ಸಮರ್ಪಣಾ ಮನೋಭಾವನೆ ಅವಶ್ಯ ಎಂದು ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್‌ಹೇಳಿದರು. ಇಲ್ಲಿನ ಅಭಿನೇತ್ರಿ ಸಾಂಸ್ಕೃತಿಕ ಸಂಘದ 24ನೇ ವಾರ್ಷಿಕೋತ್ಸವ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ನ 10ನೇ ವರ್ಷಾಚರಣೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆಯ ಹಾದಿಯಲ್ಲಿ ಮಕ್ಕಳನ್ನು ಮುನ್ನಡೆಸುವ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೂ ಆದ್ಯತೆ ನೀಡುವುದು ಮುಖ್ಯ ಎಂದರು.
ಸಂಘದ ಕಾರ್ಯದರ್ಶಿ ರೇವತಿ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಕಳೆದ 24 ವರ್ಷಗಳ ಹಿಂದೆ ಆರಂಭವಾದ ಸಾಂಸ್ಕೃತಿಕ ಸಂಘಟನೆ ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದೆ. ಹಲವು ವಿದ್ಯಾರ್ಥಿಗಳು ಸಂಗೀತ, ನೃತ್ಯ ಪರೀಕ್ಷೆಗಳನ್ನು ತೆಗೆದುಕೊಂಡು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಮಹಿಳೆಯರಿಗೆ ಕಸೂತಿ, ಹೊಲಿಗೆ ತರಬೇತಿ ಸೇರಿದಂತೆ ಸ್ವಯಂ ಉದ್ಯೋಗಕ್ಕೂ ಮಾರ್ಗದರ್ಶನ ನೀಡಲಾಗುತ್ತದೆ ಎಂದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯೆ ಶ್ಯಾಮಲ ಜಿ.ಲಕ್ಷ್ಮೀಪತಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯರಾದ ಬೈರೇಗೌಡ, ಎಸ್.ಡಿ.ಮುನಿರಾಜು, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್‌ಟ್ರಸ್ಟ್‌ನ ಅಧ್ಯಕ್ಷ ಬಿ.ಅನಂತರಾಮ್, ಕಾರ್ಯದರ್ಶಿ ಅರವಿಂದಗೌಡ, ಭರತನಾಟ್ಯ ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ನೃತ್ಯ, ರೂಪಕ ಮತ್ತು ಗಾಯನ ಪ್ರದರ್ಶನಗಳು ನಡೆದವು.
22ಪಿ4- ದೊಡ್ಡಬಳ್ಳಾಪುರದ ಕನ್ನಡ ಜಾಗೃತಿ ಭವನದಲ್ಲಿ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್10ನೇ ವಾರ್ಷಿಕೋತ್ಸವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್‌ಉದ್ಘಾಟಿಸಿದರು.




