Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ, 5 ಮಂದಿ ದುರ್ಮರಣ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಕೊಪ್ಪಳ:
ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶನಿವಾರ ಮತ್ತು ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು 5 ಜನ ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಲಾರಿ ಮತ್ತು ಓಮಿನಿ ನಡುವೆ ನಡೆದ ಸರಣಿ ಅಪಘಾತದಲ್ಲಿ ಐವರು ಬಲಿಯಾಗಿದ್ದರೆ, ಧಾರವಾಡದಲ್ಲಿ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಮಂತ್ರಾಲಯಕ್ಕೆ ಹೊರಟಿದ್ದ ಐವರ ದುರಂತ ಅಂತ್ಯ, ಇಬ್ಬರು ಗಂಭೀರ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಬೆಳಗಿನ ಜಾವ ಘೋರ ದುರಂತವೊಂದು ಸಂಭವಿಸಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತ ನಡೆದಿದ್ದು ಹೇಗೆ?:
ಪಕ್ಕದ ರಸ್ತೆಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಮಧ್ಯದ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರ ವಿವರ:
ಅಪಘಾತದ ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45), ಪ್ರವೀಣ್ ಬಾಳೆಕಾಯಿ (23) ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ, ಚಿನ್ಮಯ (30) ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ.

ಪ್ರಸ್ತುತ ಸ್ಥಿತಿ: ಅಪಘಾತದಲ್ಲಿ ಗಾಯಗೊಂಡಿರುವ ಇನ್ನು ಆರು ಜನರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೂಕ್ತ ಪರಿಹಾರಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ:
ಭೀಕರ ಅಪಘಾತದ ಕುರಿತು ತೀವ್ರ ಕರಳುಬಳ್ಳಿ ಹೆಣೆದಿರುವ ಸಂಸದ ಬಸವರಾಜ ಬೊಮ್ಮಾಯಿ ಅವರು 'ಎಕ್ಸ್' (ಟ್ವಿಟರ್) ಮೂಲಕ ಸಂತಾಪ ಸೂಚಿಸಿದ್ದಾರೆ.

"ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದ ನನ್ನ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ನಿವಾಸಿಗಳು ಮೃತಪಟ್ಟಿರುವುದು ಅತ್ಯಂತ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಹಾಗೂ ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕು" ಎಂದು ಅವರು ಆಗ್ರಹಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!