Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಸರಣಿ ಅಪಘಾತ: ಆಟೋಗೆ ಗುದ್ದಿದ ಥಾರ್‌ಕಾರ್‌; ಐವರ ದಾರುಣ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಥಾರ್ ಕಾರ್, ಆಟೋ ಮತ್ತು ಕ್ಯಾಂಟರ್ ನಡುವೆ ನಡೆದ ಈ ತ್ರಿಕೋನ ಸಂಘರ್ಷದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವಿವರ: ಆಗಿದ್ದೇನು?:
ರಸ್ತೆಯಲ್ಲಿ ಅತಿಯಾದ ವೇಗದಲ್ಲಿ ಬಂದ ಮಹೀಂದ್ರಾ ಥಾರ್ ಕಾರು, ತನ್ನ ಮುಂದೆ ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕ್ಯಾಂಟರ್ ವಾಹನಕ್ಕೆ ನುಗ್ಗಿದೆ. ಥಾರ್ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸಿಲುಕಿದ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದ ರಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರ ಗುರುತು ಪತ್ತೆ:
ದುರಂತದಲ್ಲಿ ಮೃತಪಟ್ಟವರೆಲ್ಲರೂ ಬಾಗೇಪಲ್ಲಿ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಉಮಾದೇವಿ (55), ವಿಜಯಾ (40), ಲಕ್ಷ್ಮಮ್ಮ (50), ಸರೋಜಮ್ಮ, ಆಂಜಿನಪ್ಪ (35) [ಆಟೋ ಚಾಲಕ] ಸ್ಥಳಕ್ಕೆ ಎಸ್‌ಪಿ ಭೇಟಿ, ತನಿಖೆ ಆರಂಭ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೌಶಲ್ ಚೌಕ್ಸೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ 10ಕ್ಕೂ ಹೆಚ್ಚು ಜನರನ್ನು ತಕ್ಷಣವೇ ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!