Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಜ್ಞಾನ ಸಂಪಾದನೆ ವಿದ್ಯಾರ್ಥಿ ಜೀವನದ ಮುಖ್ಯ ಗುರಿಯಾಗಬೇಕು":- ಮಾತಾಜೀ ತ್ಯಾಗಮಯೀ. 

Advertisement
Advertisement

ಚಂದ್ರವಳ್ಳಿ ನ್ಯೂಸ್  ಚಳ್ಳಕೆರೆ:-ಜ್ಞಾನ ಸಂಪಾದನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿಯಾಗಬೇಕು. ಇದನ್ನು ಪಡೆಯಲು ವಿದ್ಯಾರ್ಥಿಗಳು ಸತತ ಪ್ರಯತ್ನ ಮಾಡುತ್ತಿರಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷೆ ಮಾತಾಜೀ ತ್ಯಾಗಮಯೀ ತಿಳಿಸಿದರು.              

    ನಗರದ ಹೊರವಲಯದ ಆದರ್ಶ ವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ "ವ್ಯಕ್ತಿತ್ವ ನಿರ್ಮಾಣಕಾರಿ ಉಪನ್ಯಾಸ" ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು "ಆದರ್ಶ ವಿದ್ಯಾರ್ಥಿ ಜೀವನಕ್ಕೆ ಸಂಬಂಧಪಟ್ಟಂತೆ" ಉಪನ್ಯಾಸ ನೀಡಿದರು.                                        

ವಿದ್ಯಾರ್ಥಿಗಳು ತಮ್ಮ ಸುಪ್ತ ಶಕ್ತಿ-ಚೈತನ್ಯವನ್ನು ಪ್ರಯತ್ನ, ಏಕಾಗ್ರತೆ, ಶಿಸ್ತುಬದ್ಧ ಆಲೋಚನೆಯ ಮೂಲಕ ಜಾಗೃತಗೊಳಿಸಿ ಕೊಳ್ಳಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಮಹಾತ್ಮ ನಾಗುವ ಲಕ್ಷಣಗಳಿರುತ್ತವೆ. ವಿದ್ಯಾರ್ಥಿ ಜೀವನದ ಸಾಫಲತೆಗೆ ಪ್ರಾರ್ಥನೆ, ಧ್ಯಾನ,ಭಜನೆ, ಸದ್ಗ್ರಂಥಗಳ ಅಧ್ಯಯನ ಸಹಾಯ ಮಾಡುತ್ತದೆ. ಇವುಗಳನ್ನು ತಮ್ಮ ದಿನನಿತ್ಯದ ದಿನಚರಿಯ ಭಾಗವಹಿಸಿ ಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.            

                                ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರು.        

             ಉಪನ್ಯಾಸ ಸಭೆಯ ಅಧ್ಯಕ್ಷತೆಯನ್ನು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ಅಶೋಕರೆಡ್ಡಿ ವಹಿಸಿದ್ದರೆ ಕನ್ನಡ ಭಾಷಾ ಸಹ ಶಿಕ್ಷಕ ರುದ್ರಮುನಿ ಅವರು ಎಲ್ಲರನ್ನು ಸ್ವಾಗತಿಸಿ-ವಂದಿಸಿದರು.                                                                               ಈ ಸಂದರ್ಭದಲ್ಲಿ ಆಶ್ರಮದ ವತಿಯಿಂದ ಪುಸ್ತಕ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕ ಶಿವಯೋಗಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.