Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ದೇವನಹಳ್ಳಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು
,  ಗೋಮಾಳದ ಭೂಮಿ ಒತ್ತುವರಿ ಮಾಡಲು ಪ್ರಯತ್ನಿಸಿ ರೈತನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು   ಮಾಜಿ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ ಅವರು ತಿಳಿಸಿದರು.

ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ರವರು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೇಲಿನ ಜೂಗಾನಹಳ್ಳಿ ಗ್ರಾಮದ ಸ.ನಂ 34/4 ರಲ್ಲಿ 8 ಎಕರೆ 12 ಗುಂಟೆ  ಭೂಮಿಯನ್ನು  ಖರೀದಿ ಮಾಡಿದ್ದಾರೆ. ಆದರೆ, ಜಮೀನಿನ ಪಕ್ಕದ ಗೋಮಾಳ ಸ.ನಂ 38 ರಲ್ಲಿ ನಾಗೇಶ್ ಎಂಬುವವರಿಗೆ 1 ಎಕರೆ 20 ಗುಂಟೆ ಭೂಮಿ ಮಂಜೂರಾಗಿದೆ. ಹದ್ದುಬಸ್ತು ಮಾಡಿಸಿದಾಗ ಮಾಜಿ ಶಾಸಕರ 0.18 ಗುಂಟೆ ಹಿಡುವಳಿ ಜಮೀನನ್ನು ಗೋಮಾಳದ ಸ.ನಂ.38 ರಲ್ಲಿ ಇರುವವರು ಒತ್ತುವರಿ ಮಾಡಿರುವುದು ಕಂಡು ಬಂದಿದೆ. ಒತ್ತುವರಿ ಮಾಡಿರುವ ಭೂಮಿಯನ್ನು ಬಿಟ್ಟುಕೊಡುವಂತೆ ಮಾಜಿ ಶಾಸಕರು ನಾಗೇಶ್ ಅವರಲ್ಲಿ ಮನವಿ ಮಾಡಿದ್ದರು. ಅದನ್ನು ನಿರಾಕರಿಸಿದ ನಾಗೇಶ್ , ಹಾದಿ ಬೀದಿಯಲ್ಲಿ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

ಮಾಜಿ ಶಾಸಕರಿಗೆ ಜಮೀನು‌ಮಾರಾಟ ಮಾಡಿದ ಸಂಪಂಗಿರಾಮಯ್ಯ ಅವರು‌ಮಾತನಾಡಿ, ನಾರಾಯಣಸ್ವಾಮಿ ಅವರು ಖರೀದಿ ಮಾಡಿರುವುದು ಹಿಡುವಳಿ ಭೂಮಿ, 1935 ರಲ್ಲಿ ಪೋಡಿಯಾಗಿದ್ದು 1995 ರವರೆಗೆ ಪರಭಾರೆ ಆಗಿರಲಿಲ್ಲ, 1995 ರಲ್ಲಿ ನಾವು ಖರೀದಿ ಮಾಡಿದ್ದೇವು‌ಕಳೆದ ಎಂಟು ತಿಂಗಳ ಹಿಂದೆ ಮಾಜಿ ಶಾಸಕರಿಗೆ ಮಾರಾಟ ಮಾಡಿದ್ದೇವೆ. ನಾಗೇಶ್ ಅವರಿಗೆ ಗೋಮಾಳದಲ್ಲಿ ಮಂಜೂರಾಗಿದೆ. ಇನ್ನೂ ಪೋಡಿ ಹದ್ದುಬಸ್ತ್ ಆಗಿಲ್ಲ. ಗೋಮಾಳ ಒತ್ತುವರಿಯಾಗಿದೆ. ನನಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಎಂದು ಸುಳ್ಳು ಸುದ್ದಿ ಹಬ್ಬಿಸುವುದು ಸರಿಯಲ್ಲ, ಮೊದಲು ಪೋಡಿ ಮಾಡಿಸಿಕೊಳ್ಳಲಿ ಎಂದು ಸಲಹೆ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ