Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಸಲಿ ಚಿನ್ನ ಕದ್ದ ಜಾಗದಲ್ಲಿ ನಕಲಿ ಒಡವೆಗಳನ್ನಿಟ್ಟಿದ್ದ ಕಳ್ಳನ ಬಂಧನ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಬಂಧಿಕರ ಮನೆಯಲ್ಲೇ ಕೈಚಳಕ ತೋರಿ
, ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ಕಳವು ಮಾಡಿ ಆ ಜಾಗದಲ್ಲಿ ನಕಲಿ ಒಡವೆಗಳನ್ನು ಇಟ್ಟು ವಂಚಿಸಲು ಯತ್ನಿಸಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಅಶ್ವಥ್ ಕೆ.ಹೆಚ್. ಬಂಧಿತ ಆರೋಪಿ. ಈತ ಕಳವು ಮಾಡಿದ್ದ ಒಟ್ಟು 8.40 ಲಕ್ಷ ರೂಪಾಯಿ ಮೌಲ್ಯದ 84.3 ಗ್ರಾಂ ಚಿನ್ನಾಭರಣ ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement

ಕೃತ್ಯದ ಸಂಚು: ಕೆಂಗೇರಿಯ ಕೈಲಾಶ್ ಬಿಡಿಎ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಅಶ್ವಥ್ ಎಸ್. ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಬಂಧಿತ ಆರೋಪಿ ಅಶ್ವಥ್ ಕೆ.ಹೆಚ್., ದೂರುದಾರರ ಪತ್ನಿಗೆ ದೂರದ ಸಂಬಂಧಿಯಾಗಿದ್ದು, ಆಗಾಗ ಮನೆಗೆ ಬಂದು-ಹೋಗುತ್ತಿದ್ದ. ಮನೆಯವರೊಂದಿಗೆ ನಿಕಟ ಒಡನಾಟ ಹೊಂದಿದ್ದ ಈತ, ಇತ್ತೀಚೆಗೆ ಲಕ್ಷ್ಮಿ ಪೂಜೆಗೆ ಬಂದಿದ್ದಾಗ ಮನೆಯಲ್ಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣಿಟ್ಟಿದ್ದ.

ನಕಲಿ ಕೀ ಬಳಸಿ ಕೈಚಳಕ: ಸ್ವಲ್ಪ ದಿನಗಳ ಬಳಿಕ ಕೌಟುಂಬಿಕ ಕಾರ್ಯಕ್ರಮವೊಂದಕ್ಕಾಗಿ ಮನೆಯವರೆಲ್ಲರೂ ಊರಿಗೆ ತೆರಳಿದ್ದರು. ಇದನ್ನೇ ಅವಕಾಶವನ್ನಾಗಿ ಬಳಸಿಕೊಂಡ ಆರೋಪಿ, ನಕಲಿ ಕೀ ತಯಾರಿಸುವವರನ್ನು ಕರೆಸಿ "ಇದು ನನ್ನದೇ ಮನೆ, ಕೀ ಕಳೆದುಹೋಗಿದೆ" ಎಂದು ನಂಬಿಸಿ ಬಾಗಿಲು ತೆರೆಸಿದ್ದಾನೆ. ಬಳಿಕ ತಾನು ಮುಂಚಿತವಾಗಿ ತಂದಿದ್ದ ನಕಲಿ ಆಭರಣಗಳನ್ನು ಯಥಾವತ್ತಾಗಿ ಆ ಜಾಗದಲ್ಲಿ ಇಟ್ಟು, ಅಸಲಿ ಒಡವೆಗಳೊಂದಿಗೆ ಪರಾರಿಯಾಗಿದ್ದ.

ಸಿಕ್ಕಿಬಿದ್ದದ್ದು ಹೇಗೆ?: ಮನೆಯವರು ಊರಿನಿಂದ ವಾಪಸ್ ಬಂದ ಬಳಿಕ ಪೂಜೆ ತಟ್ಟೆಯಲ್ಲಿದ್ದ 8 ಸಾವಿರ ರೂ. ನಗದು ಹಣ ನಾಪತ್ತೆಯಾಗಿರುವುದು ಕಂಡುಬಂದಿದೆ. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅಸಲಿ ಆಭರಣಗಳೆಲ್ಲವೂ ನಕಲಿಯಾಗಿರುವುದು ಬೆಳಕಿಗೆ ಬಂದಿದೆ.

17.3 ಗ್ರಾಂ ತೂಕದ ಚಿನ್ನದ ರೋಪ್ ಚೈನ್, 45 ಗ್ರಾಂ ತೂಕದ ಹವಳದ ಚಿನ್ನದ ಸರ, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, ಒಟ್ಟು 84.3 ಗ್ರಾಂ ತೂಕದ ಚಿನ್ನಾಭರಣಗಳು ನಕಲಿಯಾಗಿರುವುದು ಪತ್ತೆಯಾಗುತ್ತಿದ್ದಂತೆ, ಮನೆ ಮಾಲೀಕ ಅಶ್ವಥ್ ಎಸ್. ಅವರು ತಕ್ಷಣವೇ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಬಿಡುಗಡೆಲಿಂಗನಹಳ್ಳಿ ಗ್ರಾಮದಲ್ಲಿ ವೀರಗಲ್ಲು, ಮಾಸ್ತಿ ಗಲ್ಲು ಪತ್ತೆಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ:ಕೃಷ್ಣಪ್ಪ ಖ್ಯಾತ ನಟ ರಂಗಾಯಣ ರಘು ಭೇಟಿ: 'ಪ್ರೇಮದ ಊರಲ್ಲಿ' ಸಿನಿಮಾ ವೀಕ್ಷಿಸುವಂತೆ ಆತ್ಮೀಯ ಮನವಿಸೊಂಡೆಕೆರೆ ಗ್ರಾಮದ ಬಸಣ್ಣ ನಿಧನಹಿರಿಯ ಪತ್ರಕರ್ತ ಬಂಡಿಗಡಿ ನಂಜುಂಡಪ್ಪ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪಶ್ರೀರಂಗಪಟ್ಟಣದಿಂದ ಮೈಸೂರಿಗೆ ಬಂದ ದಸರಾ ವೈಭವ:…ಮಳೆಯಿಲ್ಲದೆ ಒಣಗಿದ ಜೋಳದ ಹೊಲ ವೀಕ್ಷಿಸಿದ ನಿಖಿಲ್ ಕುಮಾರಸ್ವಾಮಿ; ​HMT ಕಾರ್ಖಾನೆಯ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ರಣತಂತ್ರ: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಮಾಲೋಚನಾ ಸಭೆ