Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ- ಮುಖ್ಯಮಂತ್ರಿ

Advertisement
 ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.

1984 ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ  ವರದಿಯಲ್ಲಿ ಶೇ.90 ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8 ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.

ಹಿಂದಿ ಹೇರಿಕೆಗೆ ಅವಕಾಶವಿಲ್ಲ-
ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ