Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳನ್ನೇ ಮನೆದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"
ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಖಂಡ್ ರಾಜ್ಯದ ಲೆಕ್ಕ ನೀಡಿದ್ದಾರೆ" ಎಂದು ಹೇಳುವ ಮೂಲಕ ತಾವು ಸುಳ್ಳನ್ನೇ ಮನೆದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ವಿಧೇಯ ಅನುಯಾಯಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಬೀತು ಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

ಇಂತಹದ್ದೊಂದು ಬೆತ್ತಲೆ ಸುಳ್ಳನ್ನು ನಿರ್ಲಜ್ಜತೆಯಿಂದ ರಾಜಾರೋಷವಾಗಿ ಹೇಳುವಾಗ ತಾನು ಹೊಂದಿರುವ ಸಚಿವ ಸ್ಥಾನದ ಮರ್ಯಾದೆಯನ್ನಾದರೂ ಜೋಷಿ ಅವರು ಗಮನದಲ್ಲಿಡಬೇಕಿತ್ತು. ನಾನು ಇಂದಿನ ಪತ್ರಿಕಾಗೋಷ್ಠಿಯಲ್ಲಿ 2024-25ನೇ ಸಾಲಿನಲ್ಲಿ ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದ್ದ ಎಥೆನಾಲ್ ಪ್ರಮಾಣವನ್ನು ಸೀಮಿತವಾಗಿಟ್ಟುಕೊಂಡು ಮಾತನಾಡಿದ್ದೆ, 2024-5ನೇ ಸಾಲಿನಲ್ಲಿ ಕರ್ನಾಟಕದ 46 ಡಿಸ್ಟಿಲರಿಗಳ ಏಥೆನಾಲ್ ಉತ್ಪಾದನಾ ಸಾಮರ್ಥ್ಯ 270 ಕೋಟಿ ಲೀಟರ್, ನಮ್ಮಿಂದ ತೈಲ ಕಂಪೆನಿಗಳಿಗೆ ಹಂಚಿಕೆಯಾಗಿರುವುದು ಕೇವಲ 47 ಕೋಟಿ ಲೀಟರ್.

ಈ ಅಂಕಿ ಅಂಶ ಕರ್ನಾಟಕ ಸರ್ಕಾರದ್ದಲ್ಲ, ಇದು ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾದ ಪ್ರಹ್ಲಾದ್ ಜೋಷಿ ಅವರೇ 2025ರ ಆಗಸ್ಟ್ ಆರರಂದು ಲೋಕಸಭೆಯಲ್ಲಿ ನೀಡಿರುವ ಉತ್ತರವಾಗಿದೆ. ಒಂದೋ ಜೋಷಿ ಅವರು ಇಂದು ನೀಡಿರುವ ಹೇಳಿಕೆ ಸುಳ್ಳಾಗಿರಬೇಕು, ಇಲ್ಲವಾದರೆ ಲೋಕಸಭೆಯಲ್ಲಿ ನೀಡಿದ್ದ ಉತ್ತರ ಸುಳ್ಳಾಗಿರಬಹುದು. ಯಾವ ಹೇಳಿಕೆಯನ್ನು ಒಪ್ಪಿಕೊಂಡರೂ ಜೋಷಿ ಅವರಿಗೆ ಸುಳ್ಳುಗಾರನ ಪಟ್ಟ ತಪ್ಪಿದ್ದಲ್ಲ.

ಎಥೆನಾಲ್ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಅನ್ಯಾಯ ಆಗಿರುವುದು ಇದೇ ಮೊದಲನೆ ಸಲವಲ್ಲ. 2021-22, 2022-23, 2023-24, 2024-2025ನೇ ಸಾಲಿನ ಕರ್ನಾಟಕದ ಎಥೆನಾಲ್ ಉತ್ಪಾದನೆಯ ಒಟ್ಟು ಸಾಮರ್ಥ್ಯ 879 ಕೋಟಿ ಲೀಟರ್ ಗಳಾದರೆ ರಾಜ್ಯದಿಂದ ಖರೀದ ಮಾಡಲಾಗಿರುವುದು 171 ಕೋಟಿ ಲೀಟರ್ ಮಾತ್ರ. ಇದು ಕರ್ನಾಟಕದ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಾಡಿರುವ ಘೋರ ಅನ್ಯಾಯವಲ್ಲದೆ ಮತ್ತೇನು?

ಆದರೆ ಗುಜರಾತ್ ರಾಜ್ಯದ ವಾರ್ಷಿಕ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 40 ಕೋಟಿ ಲೀಟರ್ ಇದ್ದರೆ, ತೈಲ ಮಾರಾಟ ಕಂಪನಿಗಳಿಗೆ 31 ಕೋಟಿ ಲೀಟರ್ ಹಂಚಿಕೆ ಮಾಡಲಾಗಿದೆ. ಇದ್ಯಾವ ನ್ಯಾಯ? ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡಬೇಕು ಎಂಬ ರೈತಪರವಾದ ನಮ್ಮ ಬೇಡಿಕೆಗೆ ಬೆಂಬಲ ನೀಡಬೇಕಿದ್ದ ಪ್ರಹ್ಲಾದ್ ಜೋಷಿಯವರು ನಮ್ಮ ವಿರುದ್ಧವೇ ಮಾತನಾಡಿ ರಾಜ್ಯದ ರೈತರಿಗೆ ದ್ರೋಹ ಎಸಗಿದ್ದಾರೆ ಎಂದು ಸಿಎಂ ಅವರು ಟೀಕಾಪ್ರಹಾರ ಮಾಡಿದರು.

ಸನ್ಮಾನ್ಯ ಜೋಷಿ ಅವರೇ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸ್ವತಃ ನಿಮಗೆ ಪತ್ರ ಬರೆದು ಕಬ್ಬಿಗೆ ಎಫ್.ಆರ್.ಪಿ ಮತ್ತು ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚು ಮಾಡಬೇಕು ಎಂಬ ಮನವಿ ಮಾಡಿದ್ದಾರೆ. ಕರ್ನಾಟಕದ ಬಿಜೆಪಿಯ ನಾಯಕರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕರ್ನಾಟಕದ ಎಥೆನಾಲ್ ಹಂಚಿಕೆ ಪ್ರಮಾಣ ಹೆಚ್ಚಿಸುವಂತೆ ಕೋರಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ಕುರುಡಾಗಿದೆ.

ಪ್ರಧಾನ ಮಂತ್ರಿಯವರ ಎದುರು ನೆಟ್ಟಗೆ ನಿಂತು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಿ ಅವರ ಹಿತರಕ್ಷಣೆ ಮಾಡಬೇಕೆಂದು ಹೇಳುವ ಧೈರ್ಯವಾಗಲಿ, ಬದ್ಧತೆಯಾಗಲಿ ಸಚಿವ ಜೋಷಿ ಅವರಿಗಿಲ್ಲ. ಅವರದ್ದೇನಿದ್ದರೂ ರಾಜಕೀಯ ವಿವಾದ ಎಬ್ಬಿಸುವ ಸುಳ್ಳು ಹೇಳಿಕೆಗಳ ಉತ್ತರಕುಮಾರನ ಪೌರುಷ. 

ರಾಜ್ಯದ ರೈತರನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟಬೇಕೆಂಬ ಏಕೈಕ ದುರುದ್ದೇಶದಿಂದ ಸುಳ್ಳು ಹೇಳಿಕೆ ನೀಡಿರುವ ಸಚಿವ ಜೋಷಿ ಅವರು ತಮ್ಮ ಸುಳ್ಳಿಗಾಗಿ ರಾಜ್ಯದ ರೈತರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ. ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ಹೇರಿ ಕರ್ನಾಟಕದಿಂದ ಹೆಚ್ಚಿನ ಪ್ರಮಾಣದ ಎಥೆನಾಲ್ ಖರೀದಿ ಮಾಡುವಂತೆ ಆದೇಶ ನೀಡುವಂತೆ ಮಾಡಿ, ರೈತರಿಗೆ ಬಗೆದಿರುವ ದ್ರೋಹದ ಪಾಪವನ್ನು ತೊಳೆದುಕೊಳ್ಳಬೇಕೆಂದು ಜೋಷಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ