Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಜನತೆಯ ನಿರೀಕ್ಷೆ ಹುಸಿ ಮಾಡಿದ ಬಜೆಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ
, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್. ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ.

 ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. 'ಹೇಳುವುದು ಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದವೆಲ್ಲವೂ ಘೋಷಣೆಯಾಗಿಯೇ ಉಳಿದಿದೆ, ಈ ಬಜೆಟ್ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ಅವರು ದೂರಿದ್ದಾರೆ.


ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, NHM ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಿ ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆ ಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್ ಸಿದ್ದರಾಮಯ್ಯನವರು ಮಂಡಿಸಿದ್ದಾರೆ.

ತಾವು ಘೋಷಿಸಿರುವ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ, ಆ ಮೂಲಕ ಇದೊಂದು ತೋರಿಕೆಯ ಹಾಗೂ ಜನರ ಕಿವಿಗೆ ಹೂ ಮುಡಿಸುವ ಬಜೆಟ್ ಆಗಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ