Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡ ಮಟ್ಟದಲ್ಲಿ ಜಿಎಸ್ ಟಿ ಪರಿಷ್ಕರಿಸಿದ ಕೇಂದ್ರ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಜನರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬಕ್ಕೆ ಧಮಾಕ ಸಿಕ್ಕಿದೆ. ದೀಪಾವಳಿಗೆ ಡಬಲ್ ಖುಷಿ ಸಿಕ್ಕಿದೆ. ನವರಾತ್ರಿಗೆ ನಯಾ ತೆರಿಗೆ ಜಾರಿಯಾಗುತ್ತಿದೆ.


ಕೇಂದ್ರ ಸರ್ಕಾರ ಬೆಲೆ ಏರಿಕೆ ಬರೆಯಿಂದ ಬಸವಳಿದಿದ್ದ ಜನಾಸಾಮಾನ್ಯರಿಗೆ ದೊಡ್ಡ ರಿಲೀಫ್ ನೀಡಿದೆ. ಜಿಎಸ್‌ಟಿಯಲ್ಲಿ (GST) ಭಾರೀ ಪರಿಷ್ಕರಣೆ ಮಾಡಲಾಗಿದ್ದು, ನಾಲ್ಕು ಸ್ಲ್ಯಾಬ್‌ಗಳನ್ನು 2 ಸ್ಲ್ಯಾಬ್‌ಗೆ ಇಳಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ತೆರಿಗೆ ಜಿಎಸ್‌ಟಿ ಸ್ಲ್ಯಾಬ್​ಗಳು ಜಾರಿಯಾಗಲಿವೆ. ಆದರೆ, ಜಿಎಸ್‌ಟಿ ಪರಿಷ್ಕರಣೆಯಿಂದ ರಾಜ್ಯಗಳಿಗೆ ಆಗಬಹುದಾದ ಲಾಭ ನಷ್ಟದ ಲೆಕ್ಕಾಚಾರ ಈಗ ಶುರುವಾಗಿದೆ.


ಜಿಎಸ್‌ಟಿ ಪರಿಷ್ಕರಣೆ?
ದೇಶದ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ನೇತೃತ್ವದಲ್ಲಿ ಬುಧವಾರ ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಅಳೆದು ತೂಗಿ ಜಿಎಸ್‌ಟಿ ಪರಿಷ್ಕರಣೆ ಮಾಡಲಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನೂ ಪರೋಕ್ಷವಾಗಿ ಕಟ್ಟುವ ತೆರಿಗೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಶೇ.
28 ರಷ್ಟು ತೆರಿಗೆಯನ್ನು ಶೇ 18ಕ್ಕೆ ಇಳಿಸಲಾಗಿದೆ. ಹಾಗೆಯೇ ಶೇಕಡಾ 18 ಮತ್ತು 12ರ ತೆರಿಗೆಯನ್ನು ಶೇಕಡಾ 5ಕ್ಕೆ ಇಳಿಸಲಾಗಿದೆ. ಸಭೆಯಲ್ಲಿ ರಾಜ್ಯಗಳ ಅಭಿಪ್ರಾಯ ಪಡೆದು ಈ ನಿರ್ಧಾರ ಮಾಡಲಾಗಿದೆ. ಆದರೆ, ಹಲವು ರಾಜ್ಯಗಳು ನಷ್ಟದ ಬಗ್ಗೆ ಪ್ರಸ್ತಾಪಿಸಿವೆ. ಅಲ್ಲದೇ, ಕೇಂದ್ರಕ್ಕೆ ಮನವಿಗಳನ್ನು ಮಾಡಿವೆ.


ಜಿಎಸ್​​ಟಿ ರಾಜ್ಯಗಳ ವಾದವೇನು?
ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಆದಾಯ ಕುಂಠಿತವಾಗುವ ಬಗ್ಗೆ ಕೆಲ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ. ದಿಢೀರ್ ಜಿಎಸ್‌ಟಿ ಪರಿಷ್ಕರಣೆಯಿಂದ ರಾಜ್ಯಗಳಿಗೆ ಹೊಡೆತ ಬೀಳಬಹುದು. ರಾಜ್ಯಗಳ ಆದಾಯದ ಕುಂಠಿತವಾಗುತ್ತದೆ ಎಂದು ವಾದಿಸಿವೆ. ಉದಾಹರಣೆಗೆ
; ಕರ್ನಾಟಕಕ್ಕೆ ಸುಮಾರು 15 ಸಾವಿರ ಕೋಟಿ ರೂ. ಆದಾಯದ ಕೊರತೆ ಎದುರಾಗಬಹುದು ಎಂದು ಅಂದಾಜಿಸಲಾಗಿದೆ.

ಆದರೆ, ರಾಜ್ಯಗಳು ಜಿಎಸ್‌ಟಿ ಪರಿಷ್ಕರಣೆಯನ್ನು ನೇರವಾಗಿ ವಿರೋಧಿಸಲು ಸಾಧ್ಯವಾಗದಿದ್ದರೂ, ಕೊರತೆ ಎಂದು ವಾದ ಮುಂದಿಟ್ಟಿವೆ. ಜೊತೆಗೆ ರಾಜ್ಯಗಳ ಆದಾಯಕ್ಕೆ ಕೇಂದ್ರ ಸರ್ಕಾರ ರಕ್ಷಣೆ ನೀಡಬೇಕು. ಜಿಎಸ್‌ಟಿ ಸರಳೀಕರಣದಿಂದ ಕಂಪನಿಗಳಿಗೆ ಲಾಭ ಆಗಬಾರದು.

ಜಿಎಸ್‌ಟಿ ಸರಳೀಕರಣದ ಲಾಭ ನೇರವಾಗಿ ಗ್ರಾಹಕರಿಗೆ ತಲುಪಬೇಕು. ಜಿಎಸ್‌ಟಿ ಪರಿಷ್ಕರಣೆಯಿಂದ ದೈನಂದಿನ ಅಗತ್ಯ ವಸ್ತುಗಳ ಅಗ್ಗ ವಾಗಲಿವೆ. ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕವನ್ನು ವಿಧಿಸಲಾಗುತ್ತದೆ. ಹೀಗಾಗಿ ಆದಾಯದ ಕೊರತೆ ಎದುರಿಸದಂತೆ ನೋಡಿಕೊಳ್ಳಲು ಪರಿಹಾರ ನೀಡಿ ಎಂದು ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಬಿಜೆಪಿಯೇತರ ಆಡಳಿತದ ರಾಜ್ಯಗಳು ಆಗ್ರಹಿಸಿವೆ.

ರಾಜ್ಯಗಳ ಈ ವಾದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆಯನ್ನೂ ನೀಡಿದ್ದು, ರಾಜ್ಯಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದಿದೆ.

ಜಿಎಸ್​ಟಿ ಕೇಂದ್ರ ಸರ್ಕಾರ ಹೇಳಿದ್ದೇನು?
ರಾಜ್ಯಗಳಿಗೆ ಆದಾಯದ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಮನವರಿಕೆ ಮಾಡಿದೆ. ಈ ಬಗ್ಗೆ ವಿವರಿಸಿರುವ ಕೇಂದ್ರ ಸರ್ಕಾರ
, ದೇಶದ ಮಧ್ಯಮ ಮತ್ತು ಸಣ್ಣ ಗಾತ್ರದ ಉದ್ದಿಮೆಗಳಿಗೆ (MSMEಸೆಕ್ಟರ್‌) ಜಿಎಸ್​​ಟಿ ದರ ಇಳಿಕೆಯಿಂದ ಹೊಸ ಚೈತನ್ಯ ಸಿಗಲಿದೆ.

ಇದರಿಂದಾಗಿ ದೇಶದೊಳಗೆ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ಜನರಿಂದ ಖರೀದಿ ಮತ್ತು ಮಾರಾಟ ಹೆಚ್ಚಾಗುವುದರಿಂದ ಸಮಸ್ಯೆ ಇಲ್ಲ. ಇದರಿಂದ ದೇಶದಲ್ಲಿ ಆರ್ಥಿಕ ಚೇತರಿಕೆ ಕಾಣಲಿದೆ. ಇದು ರಾಜ್ಯಗಳ ಆದಾಯಕ್ಕೂ ಪೂರಕವಾಗಿರಲಿದೆ ಎಂದು ಸಮರ್ಥಿಸಿಕೊಂಡಿದೆ. ಆದಾಗ್ಯೂ, ಕೇಂದ್ರದ ಸ್ಪಷ್ಟನೆಯನ್ನು ಒಪ್ಪಲು ಸಿದ್ದವಿಲ್ಲದ ಸುಮಾರು 8 ರಾಜ್ಯಗಳು, ಆದಾಯದ ಕುಂಠಿತ ಎಂದು ಆಕ್ಷೇಪ ಎತ್ತಿವೆ.

ಜಿಎಸ್​ಟಿ ಕಡಿತ? ಆರ್ಥಿಕ ತಜ್ಞರು ಅಭಿಪ್ರಾಯ?
ಜಿಎಸ್​ಟಿ ದರ ಪರಿಷ್ಕರಣೆಯಿಂದ ರಾಜ್ಯಗಳಿಗೆ ಯಾವುದೇ ಸಮಸ್ಯೆಯಾಗಲಾರದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದಾಯದ ಕೊರತೆಯಾಗದು ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಆರ್ಥಿಕ ತಜ್ಞ ಪ್ರೊ.ಎಸ್‌.ಆರ್‌.ಕೇಶವ್ ಪ್ರತಿಕ್ರಿಯಿಸಿದ್ದು
, ರಾಜ್ಯಗಳಿಗೆ ಆದಾಯ ಕೊರತೆ ಆಗದು. ಖರೀದಿ ಹೆಚ್ಚಾಗಲಿದೆ ಎಂದಿದ್ದಾರೆ.ಒಟ್ಟಿನಲ್ಲಿ, ಸೆಪ್ಟಂಬರ್ 22ರಿಂದ ನೂತನ ಜಿಎಸ್​​ಟಿ ಜಾರಿಯಾಗುತ್ತಿದ್ದು, ಲಾಭ ನಷ್ಟದ ಬಗ್ಗೆ ಲೆಕ್ಕಾಚಾರ ಜೋರಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ