Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರವೂ ಜಾತಿ ಸಮೀಕ್ಷೆ ನಡೆಸಲಿದ್ದು ಷಡ್ಯಂತ್ರವಿರಲಿದೆಯೇ?- ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ
, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಬೇಕೇ? ಅಥವಾ ಬೇಡವೇಎಂಬ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. 1,75,000 ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿದ್ದಾರೆ.

ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದು, ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಿದ್ದಾರೆ ಎಂದು ಸಿಎಂ ಅವರು ಹೇಳಿದರು.

ಕೇಂದ್ರ ಸರ್ಕಾರವೂ ಜಾತಿ ಸಮೀಕ್ಷೆ ನಡೆಸಲಿದ್ದು, ಅದರಲ್ಲಿಯೂ ಷಡ್ಯಂತ್ರವಿರಲಿದೆಯೇ? ಸಮೀಕ್ಷೆಗೆ ಯಾವುದೇ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಸಮಾಜದಲ್ಲಿ ಸಮಾನತೆ ತರಲು, ಬಡವರಿಗೆ ಸರ್ಕಾರಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕಾಗುತ್ತದೆ. ಇದಕ್ಕಾಗಿ ಸಮೀಕ್ಷೆ ಅಗತ್ಯವಾಗಿದೆ. ಸಮೀಕ್ಷೆಯಿಂದ ಜಾತಿ ಒಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.

ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಶಿಫಾರಸ್ಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸ್ಸು ಕಳಿಸಿದ್ದು, ಅದಕ್ಕೆ ವಿವರಣೆಯನ್ನು ಸರ್ಕಾರ ನೀಡಲಿದೆ. ಯಾವುದೇ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ