Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡಹಬ್ಬ ದಸರಾ ಉತ್ಸವ ಯಶಸ್ವಿ, ಶುಭಾಶಯ ತಿಳಿಸಿದ ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷ ತಂದಿದೆ ಎಂದು ಸಿಎಂ ತಿಳಿಸಿದರು.

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳು.

ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲಬುರಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿದ್ದು,

ಸರ್ಕಾರ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17,000 ರೂ., ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31,000 ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ.

ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ