LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 "ಸಿಎಂ ಕುರ್ಚಿ ನನ್ನದಲ್ಲ, ಜನರದ್ದು"– ಸಾಮೂಹಿಕ ತೀರ್ಮಾನಕ್ಕೆ ಒತ್ತು-ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
"ಮುಖ್ಯಮಂತ್ರಿ ಕುರ್ಚಿ ಈ ಡಿ.ಕೆ. ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ನೀಡಿರುವ ಈ ಅಧಿಕಾರವನ್ನು ನಾನು ಸಂಪೂರ್ಣವಾಗಿ ಅವರ ಸೇವೆಗೇ ಮುಡಿಪಾಗಿಡುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾವುಕರಾಗಿ ನುಡಿದಿದ್ದಾರೆ.

​ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿ, ನಂತರ ಜಂಟಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

​ಜನರ ಸೇವೆಗೆ ನನ್ನ 40 ವರ್ಷಗಳ ಅನುಭವ ಮುಡಿಪು:
​ತಮ್ಮ ವೈಯಕ್ತಿಕ ವಿಚಾರ ಹಾಗೂ ಹಿತಾಸಕ್ತಿಗಳನ್ನು ಬದಿಗಿಟ್ಟು, ಕೇವಲ ರಾಜ್ಯದ ಜನರ ಸೇವೆ ಮಾಡುವ ದೃಢ ಸಂಕಲ್ಪದೊಂದಿಗೆ ತಾವು ಈ ಜವಾಬ್ದಾರಿಯನ್ನು ಸ್ವೀಕರಿಸಿದ್ದಾಗಿ ಸಿಎಂ ತಿಳಿಸಿದರು.

​"ರಾಜ್ಯದ ಜನತೆಗೆ ನನ್ನ ಮೇಲೆ ಅಪಾರ ವಿಶ್ವಾಸವಿದೆ. ಹಿಂದೆ ನನ್ನ ವಿರುದ್ಧ ಅನೇಕ ಟೀಕೆಗಳು, ಪರವಾಗಿ ಹೊಗಳಿಕೆಗಳು ವ್ಯಕ್ತವಾಗಿರಬಹುದು. ಆದರೆ ಟೀಕೆಗಳು ಸಾಯುತ್ತವೆ, ನಾವು ಮಾಡುವ ಕೆಲಸಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ ಎಂಬುದು ನನ್ನ ನಂಬಿಕೆ. ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ಸುದೀರ್ಘ ರಾಜಕೀಯ ಅನುಭವವನ್ನು ಧಾರೆ ಎರೆಯಲಿದ್ದೇನೆ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

​ಬೇರುಗಳನ್ನು ಮರೆತರೆ ಫಲ ಸಿಗದು:
​"
ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ" ಎಂಬ ಜನಪ್ರಿಯ ಗಾದೆ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, "ನಾವು ನಮ್ಮ ಬೇರುಗಳನ್ನು ಮರೆತರೆ ಎಂದಿಗೂ ಯಶಸ್ಸಿನ ಫಲ ಸಿಗುವುದಿಲ್ಲ. ಇಂದು ಹೊಸ ದಿನ, ಹೊಸ ಕೆಲಸ. ಇಂತಹ ಸುವರ್ಣ ಅವಕಾಶವನ್ನು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಜನತೆ ನನಗೆ ನೀಡಿದ್ದಾರೆ. ನಾನು ಸದಾ ಭರವಸೆಗಳ ಮೇಲೆಯೇ ಬದುಕಿದವನು. ಈಗ ಜನರ ಸೇವೆ ಮಾಡಿ, ಸಾಧನೆಯ ಸಾಕ್ಷಿಗುಡ್ಡೆ ಬಿಟ್ಟು ಹೋಗಲು ನನಗೆ ಉತ್ತಮ ಅವಕಾಶ ಸಿಕ್ಕಿದೆ" ಎಂದರು.

​ವ್ಯಕ್ತಿಗತವಲ್ಲ, ಸಾಮೂಹಿಕ ನಾಯಕತ್ವ:
​ಸರ್ಕಾರದ ಮುಂದಿನ ನಡೆ ಹಾಗೂ ನಿರ್ಧಾರಗಳ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಈ ಸರ್ಕಾರದ ಪ್ರತಿಯೊಂದು ತೀರ್ಮಾನವೂ ಕೇವಲ ಶಿವಕುಮಾರ್ ಒಬ್ಬನ ವೈಯಕ್ತಿಕ ತೀರ್ಮಾನವಾಗಿರುವುದಿಲ್ಲ. ಬದಲಿಗೆ, ಇಡೀ ಸಚಿವ ಸಂಪುಟ ಹಾಗೂ ಸರ್ಕಾರದ 'ಸಾಮೂಹಿಕ ತೀರ್ಮಾನ' ಆಗಿರುತ್ತದೆ ಎಂದು ಸ್ಪಷ್ಟಪಡಿಸುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು