Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಜನರಿಗೆ ನಿತ್ಯ ನರಕ ತೋರಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರದ್ದು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"2 ವರ್ಷಗಳಲ್ಲಿ ಬ್ಯಾಡ್ ಬೆಂಗಳೂರು ಮಾಡಿದ್ದೇ ಕಾಂಗ್ರೆಸ್ ಸರ್ಕಾರ ಸಾಧನೆ" ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿಯಂತೂ ಸಂಪೂರ್ಣ ಕಡೆಗಣಿಸಿದ ಪರಿಣಾಮವಾಗಿ ಮಳೆಬಂದಾಗಲೆಲ್ಲಾ ನಿತ್ಯ ನರಕದ ಪರಿಸ್ಥಿತಿ ಬಂದೊದಗಿಸಿ ಜನಸಾಮಾನ್ಯರು ನಿತ್ಯವೂ ಯಾತನೆ ಅನುಭವಿಸುವಂತೆ ಮಾಡಿ ರಾಜಧಾನಿಯ ಗೌರವ ಕುಸಿಯುವಂತೆ ಮಾಡಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಅಧಿಕಾರಕ್ಕೇರಿ ಎರಡು ವರುಷ ಕಳೆದರೂ ಒಂದೇ ಒಂದೂ ಅಭಿವೃದ್ಧಿ ಯೋಜನೆ ಜಾರಿ ಮಾಡದೇ, ಯಾವುದೇ ಆಶ್ವಾಸನೆಗಳನ್ನು ಈಡೇರಿಸದೇ, ನಿತ್ಯವೂ ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆದ ರಾಜ್ಯ ಸರ್ಕಾರ ಮಳೆಯಿಂದ ಸಂಕಷ್ಟಿತರಾಗಿರುವ ಜನರ ಕಷ್ಟ ಆಲಿಸುವ ಬದಲು ಆಡಂಬರದ ಜಾಹಿರಾತುಗಳು ಹಾಗೂ ಸಮಾವೇಶದ ಮೂಲಕ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವುದು ಜನ ವಿರೋಧಿ ನಡೆಯಲ್ಲದೇ ಬೇರೇನೂ ಅಲ್ಲ.

ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳಿದ್ದ ಬೆಂಗಳೂರು ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿಗಳು ಮೂಲಭೂತ ಸೌಕರ್ಯಗಳನ್ನೂ ಒದಗಿಸಲಾಗದೆ ಬೆಂಗಳೂರು ಜನರಿಗೆ ನಿತ್ಯ ನರಕ ನಗರವಾಗಿಸಿದ್ದಾರೆ. ಇನ್ನಾದರೂ ಸಂಕಷ್ಠಿತ ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ದಪ್ಪ ಚರ್ಮದ ಭ್ರಷ್ಟ ಸರ್ಕಾರ ಮುಂದಾಗಲಿ ಎಂದು ಎಚ್ಚರಿಸಲಾಯಿತು.



ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಆರ್.ಅಶೋಕ್,  ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಎಂ.ಸತೀಶ್ ರೆಡ್ಡಿ, ಸೇರಿದಂತೆ ಪಕ್ಷದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ