ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಮಿಷನ್‌ಕರ್ನಾಟಕ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಆಸ್ತಿಗಳ ರಕ್ಷಣೆಗಾಗಿ ಜಾರಿಗೊಳಿಸಿರುವ ಇ-ಆಸ್ತಿ ನೋಂದಣಿ ಪ್ರಕ್ರಿಯೆಗೆ ಗ್ರಹಣ ಹಿಡಿಸಿದೆ ಎಂದು ಜೆಡಿಎಸ್ ಟೀಕಿಸಿದೆ.
ಸರ್ಕಾರದ ಇ-ಆಸ್ತಿ ನೋಂದಣಿ ಪೋರ್ಟಲ್‌ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದು, ರಾಜ್ಯಾದ್ಯಂತ ಆಸ್ತಿ ನೋಂದಣಿ, ಮಾರಾಟ, ಖರೀದಿ ಪ್ರಕ್ರಿಯ ಬಹುತೇಕ ಬಂದ್‌ಆಗಿದ್ದು, ಭ್ರಷ್ಟಾಚಾರಕ್ಕೂ ಎಡೆಮಾಡಿಕೊಟ್ಟಿದೆ ಎಂದು ಜೆಡಿಎಸ್ ಆರೋಪಿಸಿದೆ.


