Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರ್ಚಿ ಕಿತ್ತಾಟ, ಭ್ರಷ್ಟಾಚಾರಗಳಲ್ಲಿ ಮುಳುಗಿ ಹೋದ ಕಾಂಗ್ರೆಸ್ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕುರ್ಚಿ ಕಿತ್ತಾಟ, ಭ್ರಷ್ಟಾಚಾರಗಳಲ್ಲಿ ಮುಳುಗಿ ಹೋಗಿದ್ದು, ಆಡಳಿತ ನಿರ್ವಹಣೆಯೂ ತನ್ನ ಜವಾಬ್ದಾರಿ ಎನ್ನುವುದನ್ನು ಸಂಪೂರ್ಣವಾಗಿ ಮರೆತುಬಿಟ್ಟಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆಯಿಂದ ಒಪಿಡಿ ಸೇವೆ ಬಂದ್ ಆಗುವ ಆತಂಕ ಎದುರಾಗಿದ್ದು, ಸರ್ಕಾರ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಟೀಕಾಪ್ರಹಾರ ಮಾಡಿದ್ದಾರೆ.

ಭಾರತದಲ್ಲಿ ಈಗಾಗಲೇ ವೈದ್ಯರ ಕೊರತೆಯಿದೆ. ವೈದ್ಯರ ಬೇಡಿಕೆಗಳು ನ್ಯಾಯಯುತವಾಗಿದ್ದು, ಔಷಧ ಪೂರೈಕೆ, ವರ್ಗಾವಣೆ ನೀತಿ, ಹುದ್ದೆಗಳ ಭರ್ತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ವೈದ್ಯರ ಸಂಘ ಸಂಧಾನಕ್ಕೆ ಸಿದ್ಧವಿದ್ದರೂ, ಅದಕ್ಕೆ ಮುಂದಾಗದಿರುವುದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿದೆ. ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಿದೆ. ಸರ್ಕಾರಕ್ಕೆ ಇದು ಆದ್ಯತೆಯ ವಿಚಾರವೇ ಅಲ್ಲ. ಸರ್ಕಾರ 10 ತಿಂಗಳಿಂದ ಹಣ ಪಾವತಿ ಬಾಕಿ ಉಳಿಸಿದ ಪರಿಣಾಮವಾಗಿ ಎಂಆರ್‌ಐ, ಡಯಾಲಿಸಿಸ್ ಸೇವೆಗಳೂ ಸ್ಥಗಿತಗೊಂಡು, ಜನಸಾಮಾನ್ಯರು ನರಳುವಂತಾಗಿದೆ ಎಂದು ರವಿ ಅವರು ಟೀಕಿಸಿದರು.

ಒಂದು ವೇಳೆ ತುರ್ತು ಸೇವೆಯೂ ಸ್ಥಗಿತಗೊಂಡರೆ, ಆಗ ಜನರಿಗೆ ಉಂಟಾಗುವ ಸಮಸ್ಯೆಗೆ ಜವಾಬ್ದಾರಿ ಯಾರು? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ವೈದ್ಯರ ಸಂಘದೊಡನೆ ಸಮಾಲೋಚನೆ ನಡೆಸಿ, ವೈದ್ಯರ ನ್ಯಾಯಯುತ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಈಗಾಗಲೇ ಜನವಿರೋಧಿ ಎನಿಸಿಕೊಂಡಿರುವ ಸರ್ಕಾರ ಜನರ ಪ್ರಾಣದೊಡನೆ ಆಟವಾಡುವ ಸರ್ಕಾರ ಎನಿಸಿಕೊಳ್ಳಲಿದೆ ಎಂದು ರವಿ ಅವರು ಎಚ್ಚರಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ