Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಆರೋಗ್ಯ ಕ್ಷೇತ್ರಕ್ಕೆ ಗ್ರಹಣ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ
ಅಧಿಕಾರಕ್ಕೆ ಬಂದ ದಿನದಿಂದ ಆರೋಗ್ಯ ಕ್ಷೇತ್ರಕ್ಕೆ ಸಂಪೂರ್ಣ ಗ್ರಹಣ ಹಿಡಿದಿದ್ದು, ಬಡವರ ಜೀವಕ್ಕೆ ಗ್ಯಾರಂಟಿ ಇಲ್ಲವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಹೃದಯ ಸಂಬಂಧಿ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿರುವ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಆರೇಳು ತಿಂಗಳಿಂದ ವೈದ್ಯಕೀಯ ಸೇವಾ ಸೌಲಭ್ಯಗಳು, ಶಸ್ತ್ರಚಿಕಿತ್ಸೆಗಳು ಬಡವರಿಗೆ ಮರೀಚಿಕೆಯಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಜಯದೇವ  ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದ ಅವಧಿಯಲ್ಲಿಸೇವೆ ಮೊದಲು, ಶುಲ್ಕ ಆಮೇಲೆಎಂಬ ಧ್ಯೇಯ ವಾಕ್ಯದಡಿ ಮಧ್ಯಮ ವರ್ಗದವರಿಗೆ ಕನಿಷ್ಟ ಶುಲ್ಕದಲ್ಲಿ ಹಾಗೂ ಸಾವಿರಾರು ಬಡವರಿಗೆ ಉಚಿತವಾಗಿ ಚಿಕಿತ್ಸೆ ಸಿಗುತ್ತಿತ್ತು.

 ಯಾರಿಗೂ ವಿಳಂಬವಾಗದಂತೆ ಉತ್ಕೃಷ್ಟ ದರ್ಜೆಯ ಚಿಕಿತ್ಸೆ ನೀಡುವ ಮೂಲಕ ಜಯದೇವ ಸಂಸ್ಥೆ ತನ್ನ ಉತ್ತಮ ಗುಣಮಟ್ಟವನ್ನು ಕಾಯ್ದುಕೊಂಡಿತ್ತು.

ಬಡವರಿಗೆ ಸಂಜೀವಿನಿಯಾಗಿದ್ದ ಜಯದೇವದಲ್ಲಿ ಈಗ ಸಕಾಲಕ್ಕೆ ಸಮರ್ಪಕವಾಗಿ ಯಾವುದೇ ಸೇವೆಗಳು ದೊರೆಯುತ್ತಿಲ್ಲ. ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಆರೇಳು ತಿಂಗಳು ಕಾಯಬೇಕಾದ ಅನಿವಾರ್ಯತೆ ಉದ್ಭವಿಸಿದೆ ಎಂಬ ದೂರುಗಳು ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ, ಹೊಣೆಗೇಡಿತನ ಹಾಗೂ ಆರೋಗ್ಯ ಕ್ಷೇತ್ರದ ಕಡೆಗಣನೆಯನ್ನು ಜಗಜ್ಜಾಹೀರುಗೊಳಿಸಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂಪಾಯಿ ದುಬಾರಿ ಚಿಕಿತ್ಸಾ ವೆಚ್ಛ ಭರಿಸಲಾಗದೆ ಜಯದೇವ ಸಂಸ್ಥೆಯನ್ನು ನಂಬಿಕೊಂಡಿರುವ ಬಡ ಜನರ ಜೀವದ ಗತಿಯೇನು? ರಾಜ್ಯದಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವುಗಳ ಬಳಿಕವೂ ಎಚ್ಚೆತ್ತುಕೊಳ್ಳದ  ಸಿದ್ದರಾಮಯ್ಯ ಸರ್ಕಾರ ಇನ್ನಾದರೂ ಗಮನ ಹರಿಸಿ  ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹದಗೆಟ್ಟಿರುವ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಜೆಡಿಎಸ್  ಪಕ್ಷ ಆಗ್ರಹಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ