Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾ.22ರ ಕರ್ನಾಟಕ ಬಂದ್ ಕೈ ಬಿಡಲು ಒಮ್ಮತದ ನಿರ್ಧಾರ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮಾರ್ಚ್
22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯುಗಾದಿ ಹಬ್ಬ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ  ಇರುವ ಹಿನ್ನಲೆಯಲ್ಲಿ ಬಹಳಷ್ಟು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಕಾರಣ ಬಂದ್ ಕೈ ಬಿಡಲು ನಿರ್ಧಾರ ಮಾಡಲಾಗಿದೆ.

ನಗರದ ಕನ್ನಡ ಜಾಗೃತ ಭವನದಲ್ಲಿ ನೆಡೆದ ಸಭೆಯಲ್ಲಿ ಹಲವು ಕನ್ನಡ ಪರ ಸಂಘಟನೆಗಳ ಮುಖಂಡರು ಮಾರ್ಚ್ 22ರ ಶನಿವಾರದಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ನೀಡಿರುವ ಬಂದ್ ಕುರಿತು ಚರ್ಚಿಸಿದರು.

 ನಾಡು ನುಡಿ ವಿಚಾರವಾಗಿ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ಸಂಘ ಸಂಸ್ಥೆಗಳು ಹಿಂಜರಿದ ಉದಾಹರಣೆ  ಎಂದಿಗೂ ಇಲ್ಲ, ಆದರೆ ಎಸ್ ಎಸ್ ಎಲ್ ಸಿ  ವಾರ್ಷಿಕ ಪರೀಕ್ಷೆಯು  ಮಾರ್ಚ್ 21ರಿಂದ  ಆರಂಭವಾಗಲಿದ್ದು , ನಾವು ಬಂದ್ ಗೆ ಕರೆ ನೀಡಿದರೆ, ಶಾಲಾ ಮಕ್ಕಳು ಪರದಾಡುವ ಪರಿಸ್ಥಿತಿ ಎದುರಾಗುತ್ತದೆ ಅಲ್ಲದೇ ಪರೀಕ್ಷೆ ಕೇಂದ್ರಗಳಿಗೆ ಮಕ್ಕಳು ತೆರಳಲು ಕಷ್ಟವಾಗುತ್ತದೆ ಜೊತೆಗೆ ನಮ್ಮ ದೊಡ್ಡಬಳ್ಳಾಪುರ ಜನತೆ ಬಹುತೇಕ ನೇಕಾರಿಕಾ ವೃತ್ತಿಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ,ಯುಗಾದಿ ಹಬ್ಬದ ಸಂದರ್ಭದಲ್ಲಿ ಬಂದ್ ಮಾಡುವುದರಿಂದ ನೇಕಾರಿಕೆಯ ಮೇಲೆ ಪೆಟ್ಟು ಬೀಳುತ್ತದೆ ಅಲ್ಲದೇ ಸ್ಥಳೀಯ ವ್ಯವಹಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆಯೆಂದು ಚರ್ಚೆಯಲ್ಲಿ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಗಾಗಿ ಸರ್ವ ಸಂಘಟನೆಗಳ ಮುಖಂಡರುಪ್ರಮುಖರು ಒಮ್ಮತದಿಂದ  ಮಾರ್ಚ್ 22ರಂದು  ನಗರದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಸಾಂಕೇತಿಕವಾಗಿ  ಘೋಷಣೆ ಕೂಗುವ ಮೂಲಕ ಕರ್ನಾಟಕ ಬಂದ್ ಕೈ ಬಿಡಲು ನಿರ್ಧಾರ ಮಾಡಿದರು.  ಸಭೆಯಲ್ಲಿ ತಾಲೂಕಿನ  ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರಮುಖರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ