Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೀವ್‌ಗಾಂಧಿ ಹಾಗೂ ದೇವರಾಜ ಅರಸುರವರ ಕೊಡುಗೆ ಅಪಾರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಕೊಡುಗೆ ಅಪಾರ ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಗುಣಗಾನ ಮಾಡಿದರು.


ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ದಿವಂಗತರುಗಳಾದ ರಾಜೀವ್‌ಗಾಂಧಿ ಹಾಗೂ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆಯಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ರಾಜೀವ್‌ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಅನೇಕರು ವಿರೋಧಿಸಿದರು. ಯಾವುದನ್ನು ಲೆಕ್ಕಿಸದೆ ವಿಜ್ಞಾನ-ತಂತ್ರಜ್ಞಾನದಲ್ಲಿ ಭಾರತದ ಕಡೆ ಬಲಿಷ್ಟ ರಾಷ್ಟ್ರಗಳು ತಿರುಗಿ ನೋಡುವಂತೆ ಮಾಡಿದರು. ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸುರವರು ೨೦ ಅಂಶಗಳ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಚಾಚೂ ತಪ್ಪದೆ ಅನುಷ್ಟಾನಕ್ಕೆ ತಂದರು. ಜನತಾ ಮನೆ, ವಿಧವಾ ವೇತನ, ಪದವೀಧರರಿಗೆ ಸ್ಟೈಫಂಡ್ ಕೊಟ್ಟರು ಎಂದು ಸ್ಮರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ಬೆಳೆಯಬೇಕೆಂಬ ದೂರ ದೃಷ್ಟಿ ರಾಜೀವ್‌ಗಾಂಧಿರವರಲ್ಲಿದ್ದ ಪರಿಣಾಮ ತಂತ್ರಜ್ಞಾನದಲ್ಲಿ ದೇಶ ಮುಂದುವರೆದಿದೆ. ಹದಿನೆಂಟು ವರ್ಷದ ಯುವ ಜನಾಂಗಕ್ಕೆ ಮತದಾನದ ಹಕ್ಕು ನೀಡಿದರು. ಅದೆ ರೀತಿ ಡಿ.ದೇವರಾಜ ಅರಸುರವರು ಹಿಂದುಳಿದವರು, ಶೋಷಿತರು, ಧಮನಿತರ ಪರವಾಗಿ ಅನೇಕ ಕಾಯಿದೆಗಳನ್ನು ಜಾರಿಗೊಳಿಸಿದರು ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡುತ್ತ ತುಳಿತಕ್ಕೊಳಗಾದವರಿಗೆ ಧ್ವನಿ ಕೊಟ್ಟಂತ ಧೀಮಂತ ನಾಯಕ ದೇವರಾಜ ಅರಸುರವರು ಬಸವಂತಪ್ಪನವರ ಜೊತೆ ಸೇರಿಕೊಂಡು ಮಲ ಹೊರುವ ಪದ್ದತಿಯನ್ನು ನಿರ್ಮೂಲನೆಗೊಳಿಸಿದರು. ಉಳುವವನೆ ಭೂಮಿಯ ಒಡೆಯ ಎನ್ನುವ ಕಾಯಿದೆ ಜಾರಿಗೆ ತಂದರು. ಭಾರತ ವಿಜ್ಞಾನ ತಂತ್ರಜ್ಞಾನದಲ್ಲಿ ಮುಂದುವರೆದಿದೆಯೆಂದರೆ ರಾಜೀವ್‌ಗಾಂಧಿರವರ ದೂರದೃಷ್ಟಿ ಕಾರಣ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಬೇಕೆಂಬ ಹೆಬ್ಬೆಯಕೆಯಿಂದ ಅನೇಕ ದೇಶಗಳನ್ನು ಸುತ್ತಾಡಿದ ರಾಜೀವ್‌ಗಾಂಧಿರವರು ಹೊರದೇಶಗಳಲ್ಲಿದ್ದ ಭಾರತದ ೭೬ ವಿಜ್ಞಾನಿಗಳನ್ನು ಕರೆಸಿಕೊಂಡು ಸಂಪನ್ಮೂಲಗಳನ್ನು ಒದಗಿಸಿ ಮೊಬೈಲ್ ಕಂಪ್ಯೂಟರ್‌ಗಳನ್ನು ಕಂಡು ಹಿಡಿದ ಫಲವಾಗಿ ಎಲ್ಲರ ಕೈಯಲ್ಲಿ ಹರಿದಾಡುತ್ತಿವೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ಗೆ ಶಕ್ತಿ ತುಂಬಿದರೆಂದು ತಿಳಿಸಿದರು.

ಹಿಂದುಳಿದ ವರ್ಗಗಳ ಧೀಮಂತ ನಾಯಕರೆನಿಸಿಕೊಂಡಿದ್ದ ಡಿ.ದೇವರಾಜ ಅರಸುರವರು ಬಡವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಈ ಇಬ್ಬರು ಮಹಾನ್ ನಾಯಕರುಗಳ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳುವಂತೆ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ ಭಾರತ ವಿಜ್ಞಾನ ತಂತ್ರಜ್ಞಾನದಲ್ಲಿ ಬಲಶಾಲಿಯಾಗಿದೆಯೆಂದರೆ ರಾಜೀವ್‌ಗಾಂಧಿರವರೆ ಕಾರಣ. ಮೊಬೈಲ್ ಕಂಪ್ಯೂಟರ್ ಅವರ ಕೊಡುಗೆ. ಅದೇ ರೀತಿ ತಳಸಮುದಾಯ, ಶೋಷಿತರು, ಹಿಂದುಳಿದವರಿಗೆ ರಾಜಕೀಯವಾಗಿ ಶಕ್ತಿ ತುಂಬಿದ್ದು ಡಿ.ದೇವರಾಜ ಅರಸು ಎಂದು ನೆನಪಿಸಿಕೊಂಡರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡುತ್ತ ಹಿಂದುಳಿದವರಲ್ಲಿ ಶಕ್ತಿ ತುಂಬಿದವರೆಂದರೆ ಡಿ.ದೇವರಾಜ ಅರಸುರವರು ಎನ್ನುವುದನ್ನು ಯಾರು ಮರೆಯಬಾರದು. ಹಾಗಾಗಿ ಹಿಂದುಳಿದವರು ಸಂಘಟನೆಯಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‌ಕುಮಾರ್,

ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಅಧ್ಯಕ್ಷ ಅನಂತ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ನ್ಯಾಯವಾದಿಗಳಾದ ಹೆಚ್.ಓ.ಜಗದೀಶ್ ಗುಂಡೇರಿ, ಸುದರ್ಶನ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಹೆಚ್.ಅಂಜಿನಪ್ಪ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಮರ್ಥರಾಯ್, ವಸೀಂ, ಪ್ರಕಾಶ್, ಶಶಿ, ಜಿ.ವಿ.ಮಧುಗೌಡ, ಎ.ಸಾಧಿಕ್‌ವುಲ್ಲಾ, ನಗರಸಭೆ ನಾಮ ನಿರ್ದೇಶನ ಸದಸ್ಯ ಶಬ್ಬೀರ್‌ಭಾಷ, ಚಾಂದ್‌ಪೀರ್, ರೇಣುಕ, ರಮೇಶ್ ಇನ್ನು ಅನೇಕರು ಜಯಂತಿಯಲ್ಲಿ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ