Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ಜೀವ ಹಂಗು ತೊರೆದು ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆಗೆ ಪ್ರಯತ್ನ ಮಾಡಿದ್ದರು ಸ್ಥಳೀಯ ಮೇಸ್ತ್ರಿ,ಆದರೆ ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಸಮಯದಲ್ಲಿ ಪ್ರಥಮ ಚಿಕಿತ್ಸೆ ಮತ್ತು ಅಂಬ್ಯೂಲೆನ್ಸ್ ಸಿಗದ ಹಿನ್ನಲೆ ಬಾಲಕ ಸಾವನ್ನಪ್ಪಿದ್ದಾನೆ.

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ  8 ವರ್ಷದ ನಾಗಚೇತನ್ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ, ಮೃತ ಬಾಲಕನ ತಂದೆ ನರಸಿಂಹಲು ತಾಯಿ ಭಾಗ್ಯಮ್ಮ ಆಂಧ್ರಪ್ರದೇಶದ ಪೆನಗೊಂಡ ಬಳಿಯ ಮುದ್ದೆಪಲ್ಲಿ ಗ್ರಾಮದವರು, ಕಳೆದ ಭಾನುವಾರ ಕಟ್ಟಡ ನಿರ್ಮಾಣಕ್ಕೆಂದು ದೊಡ್ಡಬಳ್ಳಾಪುರಕ್ಕೆ ಬಂದಿದ್ದರು, ಇಂದು ಕೊನಘಟ್ಟ ಗ್ರಾಮದಲ್ಲಿ ಮನೆ ಕಟ್ಟುವ ಕೆಲಸಕ್ಕೆ ಕೂಲಿಯಾಳುಗಳಾಗಿ ಬಂದಿದ್ದರು, ಜೊತೆಯಲ್ಲಿ ಮಕ್ಕಳನ್ನು ಕರೆದುಕೊಂಡು ಬಂದಿದ್ದಾಗ ದುರ್ಘಟನೆ ಸಂಭವಿಸಿದೆ.

ಕಟ್ಟಡ ಕೆಲಸ ನಡೆಯುತ್ತಿದ್ದ ಸ್ಥಳದ ಪಕ್ಕದಲ್ಲಿಯೇ ದೇವರಾಜ್ ಎಂಬುವರಿಗೆ ಸೇರಿದ ತೋಟವಿದೆ, ಮೃತ ಬಾಲಕ ತನ್ನ ತಂಗಿ ಜೊತೆ ಶೌಚ ಕಾರ್ಯಕ್ಕೆಂದು ತೋಟಕ್ಕೆ ತೆರಳಿದ್ದಾಗ, ಕೃಷಿ ಹೊಂಡಕ್ಕೆ ಬಾಲಕ  ನಾಗ ಚೈತನ್ಯ  ಬಿದ್ದಿದ್ದಾನೆ, ಆತನ ತಂಗಿ ಅಪ್ಪ ಅಮ್ಮ ಕೆಲಸ ಮಾಡುತ್ತಿದ್ದಲ್ಲಿಗೆ ಬಂದು ಸುದ್ದಿ ತಿಳಿಸಿದ್ದಾಳೆ.

ಮೃತ ಬಾಲಕನ ತಾಯಿ ಚೀರಾಡುತ್ತಿದ್ದನ್ನು ಗಮನಿಸಿದ ಮೇಸ್ತ್ರಿ ತಮ್ಮಯ್ಯ ಎಂಬುವರು, ಕೃಷಿ ಹೊಂಡದ ಬಳಿ ಬಂದಿದ್ದಾರೆ, ಕೃಷಿ ಹೊಂಡಕ್ಕೆ ಇಳಿದು ಬಾಲಕನ ಪ್ರಾಣ ಕಾಪಾಡಿದ್ದಾರೆ, ತಕ್ಷಣವೇ ಬಾಲಕನನ್ನು ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದು ಕೊಂಡು ಬಂದಿದ್ದಾರೆ.ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂದು ಅಲ್ಲಿನ ಸಿಬ್ಬಂದಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಕಳಿಸಿದ್ದಾರೆ. ಆದರೆ ಆಸ್ಪತ್ರೆಗೆ ಬಂದಾಗ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತ ಪಟ್ಟಿರುವುದನ್ನ ದೃಢಪಡಿಸಿದ್ದಾರೆ.

ಘಟನೆ ಸಂಬಂಧ ಸ್ಥಳೀಯರಾದ ವೆಂಕಟೇಶ್ ಮಾತನಾಡಿ, ಕೃಷಿ ಹೊಂಡದ ಸುತ್ತ ತಂತಿ ಬೇಲಿಯನ್ನ ಹಾಕಿಲ್ಲ, ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ, ತೋಟದ ಮಾಲೀಕನ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ, ಜೊತೆಗೆ ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ, ಅಂಬ್ಯೂಲೆನ್ಸ್ ನಲ್ಲಿ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಕಳಿಸಿದ್ದರೆ ಬಾಲಕ  ಬದುಕುಳಿಯುತ್ತಿದ್ದ, ಬಾಲಕ ಸಾವಿಗೆ ಆರೋಗ್ಯ ಸಿಬ್ಬಂದಿಯ ನಿರ್ಲಕ್ಷ್ಯವು ಕಾರಣ ಎಂದು ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ