Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾನರ್ ಕಟ್ಟಲು ನಿಷೇಧ ಹೇರಿದ ಜಿಲ್ಲಾಡಳಿತ

Advertisement
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಬ್ಯಾನರ್ ಕಟ್ಟುವ  ವಿಚಾರಕ್ಕೆ ಬಳ್ಳಾರಿಯಲ್ಲಿ ನಡೆದ ಗಲಾಟೆಯಿಂದಾಗಿ ಬ್ಯಾನರ್ ಕಟ್ಟುವುದನ್ನು ನಿಷೇಧಿಸಲಾಗಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್​​ ಕಾರ್ಯಕರ್ತನೊಬ್ಬ ಮೃತಟಪಟ್ಟ ಪ್ರಕರಣದಿಂದಾಗಿ ಬ್ಯಾನರ್ ಕಟ್ಟುವುದನ್ನ ನಿಷೇಧಿಸಲಾಗಿದೆ ಎನ್ನಲಾಗುತ್ತಿದೆ.


ಬಳ್ಳಾರಿ ಜಿಲ್ಲಾಡಳಿತ ಗಲಾಟೆ ನಂತರ ಎಚ್ಚೆತ್ತುಕೊಂಡು ಬ್ಯಾನರ್​​ ವಿಚಾರವಾಗಿ ಕಠಿಣ ಕ್ರಮಗಳ ಜಾರಿಗೆ ಮುಂದಾಗಿದೆ. ಬಳ್ಳಾರಿಯ ಗಲಭೆ ಬಳಿಕ ಶಾಂತಿಭಂಗ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್​ ಅಳವಡಿಕೆಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿದ್ರೆ ದಂಡ ಬೀಳಲಿದೆ.

ಬಳ್ಳಾರಿ ನಗರದಲ್ಲಿ ಅನುಮತಿ ಇಲ್ಲದೆ ಯಾವುದೇ ರೀತಿಯ ಬ್ಯಾನರ್, ಹೋಲ್ಡಿಂಗ್ಸ್, ಫ್ಲೆಕ್ಸ್​​​ ಅಥವಾ ಪೋಸ್ಟರ್ ಅಳವಡಿಕೆಗೆ ಜಿಲ್ಲಾಡಳಿತ ನಿಷೇಧ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಇವುಗಳ ಅವಳವಡಿಕೆಗೆ ಸ್ಥಳೀಯ ಆಡಳಿತ ಸಂಸ್ಥೆಯ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ.


ನಿಯಮ ಜಾರಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಅಂತಹ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳೋದಾಗಿ ಎಚ್ಚರಿಸಲಾಗಿದೆ. ಅನಧಿಕೃತ ಜಾಹೀರಾತು ಮತ್ತು ಬ್ಯಾನರ್​ಗಳ ಮೇಲೆ ಪೊಲೀಸ್ ಇಲಾಖೆ ಇನ್ಮುಂದೆ ನಿಗಾ ಇಡಲಿದ್ದು, ಬ್ಯಾನರ್​​ ವಿಚಾರವಾಗಿಯೇ ಗಲಾಟೆ ನಡೆದು ಜಿಲ್ಲೆ ಪ್ರಕ್ಷುಬ್ಧಗೊಂಡಿದ್ದ ಕಾರಣ ಕಠಿಣ ನಿರ್ಧಾರಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.


ಬರ್ತಡೇಗಿಲ್ಲ ಬ್ಯಾನರ್ ಭಾಗ್ಯ​!
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್​​ ಡೇ ಸಂದರ್ಭ ಅಥವಾ ಯಾವುದೇ ಕಾರ್ಯಕ್ರಮ ಇದ್ದಾಗ ಈ ಹಿಂದೆ ಬಳ್ಳಾರಿಯಲ್ಲಿ ಬ್ಯಾನರ್​​ಗಳು ರಾರಾಜಿಸುತ್ತಿದ್ದವು.

ಆದ್ರೆ ಇದೇ ಮೊದಲ ಬಾರಿಗೆ ಯಾವುದೇ ಬ್ಯಾನರ್​​ ಇಲ್ಲದೆ ಗಣಿದಣಿ ಜನಾರ್ದನರೆಡ್ಡಿ ಅವರು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.


ನಾಯಕನ ಜನ್ಮ ದಿನವನ್ನು ಸರಳವಾಗಿ ಆಚರಿಸಲು ಬೆಂಬಲಿಗರು ಕೂಡ ನಿರ್ಧರಿಸಿದ್ದು, ಅದ್ಧೂರಿ ಆಚರಣೆ ಮತ್ತು ಕೇಕ್​​ ಕಟ್ಟಿಂಗ್​​ ಕೂಡ ಬೇಡ ಎಂದು ಜನಾರ್ದನ ರೆಡ್ಡಿ ಅವರು ತಮ್ಮ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೇವಲ ಶುಭಾಶಯಕ್ಕೆ ಜನಾರ್ದನ ರೆಡ್ಡಿ ಬರ್ತ್​​ ಡೇ ಸೀಮಿತವಾಗಿದೆ ಎನ್ನಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ