Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಮುಖಂಡ ಎಂ.ಜಯಣ್ಣ ದಾರಿಯಲ್ಲಿ ಹೋರಾಟಗಾರರು ಸಾಗಬೇಕಿದೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸಂಘಟನೆಗಳು ನೂರಾರು ಹುಟ್ಟಿಕೊಂಡಿರುವ ಈ ಕಾಲದಲ್ಲಿ ಸಂಘಟನೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬಾರದೆಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ ತಿಳಿಸಿದರು.


ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ದಲಿತ ಮುಖಂಡ ಎಂ.ಜಯಣ್ಣ ಹೋರಾಟಕ್ಕೆ ಬುನಾದಿ ಹಾಕಿದ್ದಾರೆ. ದಲಿತರ ಮೇಲೆ ಎಲ್ಲಿಯೇ ದೌರ್ಜನ್ಯ, ದಬ್ಬಾಳಿಕೆಯಾದರೆ ನ್ಯಾಯಕ್ಕಾಗಿ ಬೀದಿಗಿಳಿಯುತ್ತಿದ್ದರು. ಅಂತಹವರ ಹಾದಿಯಲ್ಲಿ ಈಗಿನ ಹೋರಾಟಗಾರರು ಸಾಗಬೇಕಿದೆ ಎಂದು ಕರೆ ನೀಡಿದರು.

ಸಂಘಟನೆಗಳು ಜನರಿಗೆ ಮೋಸ ಮಾಡಬಾರದು. ನಿಜವಾದ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು. ಕಾರ್ಮಿಕರಿಗೆ ಆರೋಗ್ಯ ವಿಮೆ, ಮೃತಪಟ್ಟಾಗ ಪರಿಹಾರ ಸಿಗಬೇಕಿದೆ. ಇದರ ಬಗ್ಗೆ ಸಂಘಟನೆ ಹೆಚ್ಚು ಕಾಳಜಿ ವಹಿಸುವಂತೆ ಜಯಣ್ಣ ಮನವಿ ಮಾಡಿದರು.

ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಎಂತಹುದೆ ಸಂದರ್ಭದಲ್ಲಿ ಸಂಘಟನೆಯನ್ನು ದುರ್ಬಳಕೆ ಮಾಡಿಕೊಳ್ಳಬಾರದು. ನೊಂದವರ ಪರವಾಗಿರಬೇಕು. ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಿಷ್ಟವಾಗಿ ಕಟ್ಟುವುದರ ಜೊತೆಗೆ ಪ್ರತಿ ತಾಲ್ಲೂಕಿನಲ್ಲಿಯೂ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಹೇಳಿದರು.

ರಾಜ್ಯ ಉಸ್ತುವಾರಿ ನಾಗರಾಜ್ ಹಿರಿಯೂರು, ಉಪಾಧ್ಯಕ್ಷ ಪಾಂಡುರಂಗಪ್ಪ ಎನ್. ಪ್ರಧಾನ ಕಾರ್ಯದರ್ಶಿ ಎಂ.ದುರುಗೇಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಬೆಳಗಟ್ಟ, ಲೇಖಕ ಆನಂದಕುಮಾರ್, ಸ್ಲಂ ಜನರ ಸಂಘಟನೆ ಜಿಲ್ಲಾಧ್ಯಕ್ಷ ಟಿ.ಮಂಜಣ್ಣ, ಮಹೇಶ್, ರಂಗಸ್ವಾಮಿ, ಬಸವರಾಜ್, ಹಾಲೇಶ್ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ