Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸಂವಿಧಾನ ಗೌರವಿಸಿ ಕಾನೂನು ಪಾಲಿಸುವುದು ಆದ್ಯ ಕರ್ತವ್ಯ

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ :
ಸಂವಿಧಾನ ಜನರ ಜೀವನಾಡಿಯಾಗಿದ್ದು
,ದೇಶದ ಸಂವಿಧಾನವನ್ನು ಗೌರವಿಸುವ ಜೊತೆಗೆ ಕಾನೂನುಗಳನ್ನು ಪಾಲಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.

ತಾಲೂಕಿನ ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಶ್ವಾರ್ಚನೆ ನೆರವೇರಿಸಿ ಮಾತಾನಾಡಿದರು.

1949 ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕಾರ ಮಾಡಲಾಯಿತು.ನಂತರ 1950 ಜನವರಿ 26 ರಂದು ಜಾರಿಗೆ ತರಲಾಯಿತು.ಡಾ. ಬಿ. ಆರ್. ಅಂಬೇಡ್ಕರ್ ಅವರ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ರಚಯಾಗಿದೆ.

ಸಂವಿಧಾನದಲ್ಲಿ ಪ್ರಯೊಬ್ಬರಿಗೂ ಹಕ್ಕುಗಳನ್ನು ನೀಡಲಾಗಿದ್ದು,ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.ಜನರು ಹಕ್ಕುಗಳನ್ನು ಅನುಭವಿಸುವಂತೆ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.

 ಉಪನ್ಯಾಸಕ ಸುರೇಶ್ ಎನ್ ಋಗ್ವೇದಿ ಮಾತನಾಡಿ ಡಾ. ಅಂಬೇಡ್ಕರ್ ವಿಶ್ವದ ಜ್ಞಾನ ಭಂಡಾರ. ಅವರು ಕೊಟ್ಟಿರುವ ಸಂವಿಧಾನ ವಿಶಿಷ್ಟ, ವಿಭಿನ್ನವಾಗಿದೆ.ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯತ್ ತರಬೇತಿ ಸಂಯೋಜಕ ಟಿ. ಜೆ. ಸುರೇಶ್ ಮಾತನಾಡಿ ಸಂವಿಧಾನ ಒಂದು ಸಮುದಾಯಕ್ಜೆ ಸೀಮಿತವಾಗಿಲ್ಲ. ಭಾರತೀಯರೆಲ್ಲರಿಗೂ ಸೇರಿದ್ದು, ಪ್ರತಿಯೊಬ್ಬರೂ ಸಂವಿಧಾನದ ಪೀಠಕೆಯನ್ನು ಅರ್ಥೈಸಿಕೊಂಡು ಪರಿಪಾಲಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ತ್ರಿವೇಣಿ ಮಾತಾನಾಡಿ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಹಲವು ಹಕ್ಕುಗಳನ್ನು ನೀಡಲಾಗಿದೆ. ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶಿವನಂಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಯೊಬ್ಬರೂ ಸಂವಿಧಾನವನ್ನು ಅರಿತು ಸಮಾಜದಲ್ಲಿ ಸಮಾನತೆಯಿಂದ ಬಾಳಬೇಕು ಎಂದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮೂರ್ತಿಬಸವಣ್ಣ, ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾವ್ಯ ಇದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು