Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆ ನಿಲ್ಲಿಸಲು ನೆಪ ಹುಡುಕುತ್ತಿರುವ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ನೆಪ ಹುಡುಕುತ್ತಿದೆ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.


ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದರು. ಶೇ.15ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಕಾಂಗ್ರೆಸ್ ಸರ್ಕಾರ ಹೇಗಾದರೂ ಮಾಡಿ ಗ್ಯಾರಂಟಿ ನಿಲ್ಲಿಸಲು ನೆಪ ಹುಡುಕುತ್ತಿದೆ ಎಂದು ದೂರಿದರು.

ರಾಜ್ಯದ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ ಎಂದು ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಾಕೀತು ಮಾಡಿದರು.

ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಆಗಿದೆ ಎಂದು ನೀವೇ ಹೇಳುತ್ತಿದ್ದೀರಿ. ಹಾಗಿದ್ದ ಮೇಲೆ ಮತ ಕೊಟ್ಟು ಅಧಿಕಾರ ನೀಡಿದ ಜನರಿಂದ ಅವುಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಮಧ್ಯಮ ವರ್ಗದ ಜನರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಅತ್ತೆಯದನ್ನು ಅಳಿಯ ದಾನ ಮಾಡಿದ ಎನ್ನುವ ಮಾತಿನಂತೆ ಪುರುಷರಿಂದ ಕಿತ್ತು ಮಹಿಳೆಯರಿಗೆ ಕೊಡುವುದಕ್ಕೆ ಇವರೇ ಆಗಬೇಕಾ?. ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಯಾವುದೇ ಮಂತ್ರಿಯ ಮಕ್ಕಳು, ಶಾಸಕರ ಮಕ್ಕಳು ಸರ್ಕಾರಿ ಬಸ್​ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನ ಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಿಗೆಯಾದರೂ ಅದು ಅವರಿಗೆ ಹೊರೆಯಾಗಲಿದೆ ಎಂದು ಕುಮಾರಸ್ವಾಮಿ  ಕಳವಳ ವ್ಯಕ್ತಪಡಿಸಿದರು.

ಸಾರ್ವಜನಿಕರು ಬಸ್ ದರ ಪ್ರಶ್ನಿಸಿದರೆ ಮಾಂಸ ತಿನ್ನುವುದಿಲ್ಲವಾ? ಎಂದು ಸಚಿವರು ಹಾರಿಕೆಯಾಗಿ ಮಾತನಾಡುತ್ತಾರೆ. ಬಡವರು ಮಾಂಸ ತಿನ್ನುವುದರ ಮೇಲೆ ಏಕೆ ಸಚಿವರಿಗೇಕೆ ಕಣ್ಣು? ಬಡ ಮಧ್ಯಮ ವರ್ಗದವರು ವಾರಕ್ಕೆ ಒಮ್ಮೆ ಮಾಂಸ ಖರೀದಿ ಮಾಡಲು ಎಷ್ಟು ಕಷ್ಟಪಡುತ್ತಾರೆ ಗೊತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಷ್ಟು ಪರಿಜ್ಞಾನ ಬೇಡವೇ ಇವರಿಗೆ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಮನೆ ಹಂಚಿಕೆಯಲ್ಲಿಯೂ ಕಾಂಗ್ರೆಸ್ ಸರ್ಕಾರದಲ್ಲಿ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಹೆಚ್​ಡಿ ಕುಮಾರಸ್ವಾಮಿ, ಲಂಚದ ಪ್ರಮಾಣ ಶೇ. 60 ತಲುಪಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ.60 ರಷ್ಟು ಲಂಚ, ಕಮಿಷನ್ ವಸೂಲಿ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಮನೆಗಳ ಹಂಚಿಕೆಯಲ್ಲಿ ಮೊದಲು ಪಿಡಿಒ ಲಂಚ ಪಡೆಯುತ್ತಿದ್ದರು. ಈಗ ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ. ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ ಹೊಡೆಯಲಾಗುತ್ತಿದೆ‌. ಸತ್ಯಮೇವ ಜಯತೇ ಎಂದರೆ ಇದೆನಾ? ಇವರ ಸತ್ಯಮೇವ ಜಯತೆ ಬರೀ ಜಾಹೀರಾತಿಗೆ ಸೀಮಿತವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

 ಗಾಂಧೀಜಿ ಅವರ ಸತ್ಯಮೇವ ಜಯತೆ ಮಾತಿನಂತೆ ಸಿದ್ದರಾಮಯ್ಯ ಅವರು ನಡೆದುಕೊಳ್ಳುತ್ತಿದ್ದಾರಾ? ಸಿದ್ದರಾಮಯ್ಯ ಅವರ ಆತ್ಮಕ್ಕೆ ಅವರೇ ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ಲವಾ? ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ಮಾಡಿದರು.

ರಾಜ್ಯದ ಗುತ್ತಿಗೆದಾರರ ಪರಿಸ್ಥಿತಿ ಶೋಚನೀಯವಾಗಿದೆ. ಕಾಂಗ್ರೆಸ್ ಪರವಾಗಿರುವ ಗುತ್ತಿಗೆದಾರರೇ ಇವತ್ತಿನ ಪರಿಸ್ಥಿತಿ ನೋಡಿದರೆ ಹಿಂದಿನ ಬಿಜೆಪಿ ಸರ್ಕಾರವೇ ಚೆನ್ನಾಗಿತ್ತು ಎನ್ನುತ್ತಿದ್ದಾರೆ. ಇದಕ್ಕೆಲ್ಲಾ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಬೆಲೆ ತರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ