Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರ ಜೊತೆ ಸರ್ಕಾರ ದೃಢವಾಗಿ ನಿಂತಿದೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್,  ಬೆಂಗಳೂರು :
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು
, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ.

ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಕೂಡ ಹೌದು ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಲು ಅವರು ಮನವಿ ಮಾಡಿದರು.

ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ