Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಸಿ, ಎಸ್ಟಿ ಉದ್ದಿಮೆದಾರರಿಗೆ ಸರ್ಕಾರ ಆರ್ಥಿಕ ಶಕ್ತಿ ತುಂಬಲಿದೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ  ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
 ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಮುಖ್ಯಾಂಶಗಳು:
ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವುದರ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆ ಪ್ರಾರಂಭಿಸಲು  ಮುಖ್ಯಮಂತ್ರಿಗಳು ಸೂಚಿಸಿದರು .


ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಇದುವರೆಗೂ 192 ಎಕರೆ ಮಂಜೂರು ಆಗಿದ್ದು, ಇನ್ನೂ  280 ಎಕರೆ ಪ್ರದೇಶದ ಅವಶ್ಯಕತೆ ಇರುವುದಾಗಿ ಸಲ್ಲಿಸಿದ ಮನವಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಿದ ಕೈಗಾರಿಕಾ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದನ್ನು ಪರಿಶೀಲಿಸಿ  ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ  ವಿವಾದಗಳಿರುವಂತಹ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವ ಸಮಸ್ಯೆಗೆ ಸ್ಪಂದಿಸಿ ಕೈಗಾರಿಕೆ ಪ್ರದೇಶದಲ್ಲಿ ಸೂಕ್ತ ಪ್ರದೇಶಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು .

 ಸಮಾಜ ಕಲ್ಯಾಣ ಇಲಾಖೆಯಿಂದ  ಉದ್ದಿಮೆದಾರರಿಗೆ ಬರಬೇಕಾಗಿರುವ ಬಾಕಿ ಇರುವ ಹಣ ಶೀಘ್ರ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಕೆಐಎಡಿಬಿ ಇ ಖಾತಾ ಹಂಚಿಕೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು .

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ