Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಘಟನೆ ಸಿಬಿಐ ತನಿಖೆಗೆ ನೀಡಲ್ಲ-ಗೃಹ ಸಚಿವ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಈ ಪ್ರಕರಣ ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರು ದಕ್ಷರಾಗಿದ್ದಾರೆ. ಅವರಿಗೆ ತನಿಖೆ ಮಾಡಲು ಆಗಲ್ಲ ಎನ್ನುವ ಪರಿಸ್ಥಿತಿ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಪ್ರಕರಣವನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ‌ ಎಂದು ಸಚಿವರು ತಿಳಿಸಿದರು.


ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು ಕುಮಾರಸ್ವಾಮಿ ಅವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ರಬ್ಬರ್ ಸ್ಟ್ಯಾಂಪ್ ಎಂದಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ. ಅವರಿಗೆ ಹೇಳ ಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮರ್ಥ್ಯ ಮತ್ತು ವ್ಯಕ್ತಿತ್ವವೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ‌ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿ ಘಟನೆ ಕುರಿತು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಕಮಿಷನರ್ ನೀಡಿದ್ದಾರೆ.

ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಂತ ಇನ್ನೇನು ಬೇಕಾಗಿದೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ವಿಪಕ್ಷಗಳು ಹೆಣ್ಣುಮಗಳ ವಿಚಾರ ಕೈಗೆತ್ತಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ, ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ‌ ಎಂದು ಹೇಳಿದ್ದಾರೆ.

ಯಾವ ಪಕ್ಷದವರೆ ಆಗಿರಲಿ, ಅವರ ರಾಜಕೀಯ ಪಕ್ಷದ ಹಿನ್ನೆಲೆಯಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ವರ್ತಿಸುವುದಿಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರೂ ಪತ್ತೆ ಹಚ್ಚಿ, ಗಡಿಪಾರು ಮಾಡುತ್ತೇವೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ