Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ದಿನಗಳ ಕಾಲ ತೋಟಗಾರಿಕಾ ಹಬ್ಬ ಆಚರಣೆ ಆಗಿದೆ-ಡಿ.ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೂರು ದಿನಗಳ ಕಾಲ ತೋಟಗಾರಿಕಾ ಬೆಳೆಗಳ ಹಬ್ಬ ಆಚರಣೆ ಆಗಿದೆ. ಜೊತೆಗೆ ವಾಣಿ ವಿಲಾಸ ಸಾಗರ ಭರ್ತಿ ಆಗಿರುವುದು ಸಂಭ್ರಮ ವೃದ್ಧಿಸಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ವಿ.ಪಿ. ಬಡಾವಣೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿರುವ 32ನೇ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲೆಯ ರೈತರು ಸಂಪ್ರದಾಯಿಕ ಬೆಳೆಗಳ ಜೊತೆಗೆ ತೋಟಗಾರಿಕಾ ವಾಣಿಜ್ಯ ಬೆಳೆಗಳಾದ ಹೂ, ಹಣ್ಣು, ತರಕಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಚಿವರು ಕರೆ ನೀಡಿದರು.

ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ ರೈತರು ಆರ್ಥಿಕವಾಗಿ ಸಬಲರಾಗಲು ವಿಫುಲ ಅವಕಾಶಗಳಿವೆ.ತೋಟಗಾರಿಕೆ ಬೆಳೆಗಳಲ್ಲಿ ರಾಜ್ಯದಲ್ಲಿ ಕೋಲಾರ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದ್ದು, ಉತ್ತಮ ಆದಾಯಗಳಿಸುತ್ತಿದೆ. ಹಾಗಾಗಿ ಕೋಲಾರ ಜಿಲ್ಲೆಯ ಮಾದರಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದು ಸಚಿವ ಸುಧಾಕರ್ ಕರೆ ನೀಡಿದರು.

 ಜಿಲ್ಲೆಯ ಮಳೆ ವರದಿ ಅವಲೋಕಿಸಿದಾಗ 10 ವರ್ಷಗಳಲ್ಲಿ 3 ವರ್ಷ ಮಾತ್ರ ಉತ್ತಮ ಹದ ಮಳೆಯಾಗಲಿದೆ. ಇನ್ನೂ 7 ವರ್ಷ ಮಳೆ ಕಡಿಮೆ ಮಳೆಯೊಂದಿಗೆ ಬರ ಕಂಡಂತಹ ಜಿಲ್ಲೆ ಇದಾಗಿದೆ. ಇದನ್ನು ಮನಗಂಡು ಜಿಲ್ಲೆಯ ರೈತರು ಹೆಚ್ಚು ತೋಟಗಾರಿಕೆ ಬೆಳೆಗಳಾದ ಹೂ, ಹಣ್ಣು-ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, 32ನೇ ಫಲ-ಪುಷ್ಪ ಪ್ರದರ್ಶನ ಅರ್ಥಪೂರ್ಣವಾಗಿದೆ. ಪ್ರದರ್ಶನದಲ್ಲಿ ಹೆಣ್ಣಿಗೆ ಗೌರವ ಸೂಚಕ ಕಲಾಕೃತಿ, ಮಯೂರ ವರ್ಮ ಕಲಾಕೃತಿ, ಸ್ವಾವಲಂಬಿ ರೈತ, ವಾಣಿವಿಲಾಸ ಸಾಗರ ಅಣೆಕಟ್ಟಿನ ಕಲಾಕೃತಿ ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ಚಿತ್ರಕಲಾವಿದರ ಕಲಾಕೃತಿಗಳನು ಪ್ರದರ್ಶಿಸಲಾಗಿದೆ. ಮೂರು ದಿನಗಳ ಕಾಲ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಾಗೋಷ್ಠಿಗಳನ್ನು ನಡೆಸಲಾಗಿದೆ. ವಿಶೇಷವಾಗಿ ತೋಟಗಾರಿಕೆ ಬೆಳೆಗಳಿಗೆ ಸಂಬAಧಿಸಿದAತೆ ಸಾಕಷ್ಟು ಚರ್ಚಿಸಲಾಗಿದೆ ಎಂದರು.

 ಜಿಲ್ಲೆಯ ಮಳೆಯಾಶ್ರಿತ ಪ್ರದೇಶದಲ್ಲಿರುವುದರಿಂದ ಅಂತರ್ಜಲದ ಕುರಿತು ಚರ್ಚಿಸಲಾಗಿದೆ. ಜೊತೆಗೆ ಸಾಂಸ್ಕೃತಿಕ ಮನೋರಂಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಹೇಳಿದದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಮಾತನಾಡಿ ರೈತರ ಉದ್ದೇಶವನ್ನು ಈಡೇರಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮಾಡಲಿ ಎಂದು ತಿಳಿಸಿದರು.
ಫಲಪುಷ್ಪ ಪ್ರದರ್ಶನದ ಮೂಲಕ ಕಾರ್ಯಕ್ರಮದ ಉದ್ದೇಶವೂ ಈಡೇರಿದಂತೆ, ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ನ್ಯಾಯಾಧೀಶರು ಮೆಚ್ಚುಗೆ ವ್ಯಕ್ತಪಡಿಸಿದರು.


ಇದೇ ಸಂದರ್ಭದಲ್ಲಿ ಹಣ್ಣು ಮತ್ತು ತರಕಾರಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪ್ಯಾನ್ಸಿ ಡ್ರೆಸ್ ಸ್ಪರ್ಧೆ, ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ತೋಟಗಾರಿಕೆ ಸಂಘದ ಸಲಹಾ ಸಮಿತಿ ಅಧ್ಯಕ್ಷ ಜಿ.ಎಸ್.ಉಜ್ಜಿನಪ್ಪ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ದೀಪಾ ಭೀಮಪ್ಪ ಹೊಂಕಳಿ, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ಜಲತಜ್ಞ ದೇವರಾಜ ರೆಡ್ಡಿ, ತೋಟಗಾರಿಕೆ ಸಂಘದ ಪದಾಧಿಕಾರಿಗಳು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ