Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್​​ ಪಕ್ಷದ ಆಂತರಿಕ ಕದನ ಉಲ್ಬಣ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಮ್ಮಲ್ಲಿ ಭಿನ್ನಮತವಿಲ್ಲ. ನಾವೆಲ್ಲ ಒಂದೇ ಎಂಬ ಜಪ ಮಾಡಿದ್ದರೂ ಸಿಎಂ-ಡಿಸಿಎಂ ಅವರ ಆಪ್ತರು ಮಾತ್ರ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು ಮೇಲಿಂದ ಮೇಲೆ ಪಕ್ಷದ ಶಿಸ್ತು ಉಲ್ಲಂಘನೆ ಆಗುತ್ತಲೇ ಇದೆ. ಕಾಂಗ್ರೆಸ್​​ ಪಕ್ಷದ ಆಂತರಿಕ ಕದನ ಉಲ್ಬಣವಾಗಿದೆ.


ಈ ಮೂಲಕ ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ಮನೆಯ ಕದ ತಟ್ಟುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದು ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆಯುತ್ತಾರಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ವರಿಷ್ಠರ ಅಂಗಳದಲ್ಲಿ ಕುರ್ಚಿ ಕದನದ ಚರ್ಚೆ?
ದೆಹಲಿಯಲ್ಲಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಆ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಿಎಂಗಿಂತ ಮುಂಚಿತವಾಗಿ ದೆಹಲಿಗೆ ತೆರಳಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಜ್ಜಾಗಿ ನಿಂತಿದ್ದಾರೆ.

ಡಿಕೆ ಶಿವಕುಮಾರ್ ಅವರು ದೆಹಲಿಗೆ ಶನಿವಾರ ತೆರಳಿದ್ದು ಮತಗಳ್ಳತನ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ದೆಹಲಿಯಲ್ಲೇ ಮೂರು ದಿನ ಉಳಿದುಕೊಳ್ಳಲಿದ್ದಾರೆ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ ವೋಟ್ ಚೋರಿ ಪ್ರತಿಭಟನೆ ಕೂಡ ಒಂದು. ಈ ಮಧ್ಯೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರ ವಿಚಾರಣೆಗೂ ಡಿಕೆ ಸಹೋದರರು ಹಾಜರಾಗಲಿದ್ದಾರೆ. ಮೂರು ದಿನ ರಾಷ್ಟ್ರ ರಾಜಕಾರಣದ ಹೆಡ್​ ಕ್ವಾಟ್ರಸ್​​ನಲ್ಲಿಯೇ ಉಳಿಯಲಿರುವ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರನ್ನೂ ಭೇಟಿ ಆಗಲಿದ್ದಾರೆ ಎನ್ನಲಾಗಿದೆ. ಒಂದೊಳ್ಳೆ ಸಮಯ ಒದಗಿ ಬಂದರೆ, ನಾಯಕತ್ವದ ವಿಚಾರವನ್ನೂ ಪ್ರಸ್ತಾಪ ಮಾಡುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ದೆಹಲಿಗೆ ಹೊರಟ ಮಂಡ್ಯ ಕಾಂಗ್ರೆಸ್ ನಾಯಕರು-
ಮಂಡ್ಯದ ಕಾಂಗ್ರೆಸ್ ನಾಯಕರು ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ವೋಟ್ ಚೋರಿ ನೆಪದಲ್ಲಿ ಹೋಗುತ್ತಿರುವ ನಾಯಕರು, ವರಿಷ್ಠರ ಮುಂದೆ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಸಿಎಂ ಬದಲಿಸುವಂತೆ ಒತ್ತಡ ಹೇರಲು ತಂತ್ರ ನಡೆಸಿದ್ದಾರೇ ಎಂಬ ಪ್ರಶ್ನೆ ರಾಜಕಾರಣದ ಪಡಸಾಲೆಯಲ್ಲಿ ಮೂಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ