Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಸೇರಿ ಎಲ್ಲರಿಗೂ ಕ್ಲೀನ್ ಚಿಟ್, ಮುಡಾ ಪ್ರಕರಣದ ತನಿಖೆ ಮುಕ್ತಾಯ

Advertisement

ಬಿ ರಿಪೋರ್ಟ್‌ ಸಲ್ಲಿಸಲು ಮುಂದಾದ ಮೈಸೂರು ಲೋಕಾಯುಕ್ತರು
ಚಂದ್ರವಳ್ಳಿ ನ್ಯೂಸ್, ಮೈಸೂರು
:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ತನಿಖೆ ಮುಕ್ತಾಯವಾಗಿದ್ದು
ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಲೋಕಾಯುಕ್ತ ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್​ ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿ‌ಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ಸಲ್ಲಿಸುವುದಾಗಿ ಲೋಕಾಯುಕ್ತರು ಮಾಹಿತಿ ನೀಡಿದ್ದಾರೆ.

ನೋಟಿಸ್​ನಲ್ಲೇನಿದೆ?- ಮುಡಾ ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್​ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ.

ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು ತನಿಖೆ ನಡೆಸಲು ತಕ್ಕುದಲ್ಲವೆಂದು ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು ಕ್ರಮ ಜರುಗಿಸತಕ್ಕುದಲ್ಲವೆಂದು ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ. ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದೆ. ಹೀಗಾಗಿ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದಿದೆ. ಇನ್ನು ಈ ವರದಿಯನ್ನು ವಿರೋಧಿಸುವುದಿದ್ದರೆ ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ್ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ಲೋಕಾಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಪ್ರಕರಣದ ಆರೋಪಿ
1ರಿಂದ ಆರೋಪಿ 4ರವರೆಗಿನ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿರುವುದಿಲ್ಲ. ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ರಿಂದ 2024ರವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನ ನೀಡಿರುವ ಆರೋಪಗಳಿವೆ. ಈ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಅಂತಿಮ ವರದಿ ಕೋರ್ಟ್‌ಗೆ ಸಲ್ಲಿಸುತ್ತೇವೆ ಎಂದು ದೂರುದಾರ ಸ್ನೇಹಮಯಿ‌ಕೃಷ್ಣಗೆ ನೀಡಿರುವ ನೋಟಿಸ್‌ನಲ್ಲಿ ಲೋಕಾಯುಕ್ತ ಉಲ್ಲೇಖಿಸಿದೆ.

 ಸ್ನೇಹಮಯಿ ಕೃಷ್ಣ ಆಕ್ರೋಶ- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಕೇಸ್‌ನಲ್ಲಿ ಕ್ಲೀನ್‌ ಚಿಟ್‌ನೀಡಿ ಬಿ ರಿಪೋರ್ಟ್‌ಸಲ್ಲಿಸಲು ಮೈಸೂರು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದು ಅವರ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದು, ಇದನ್ನ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದೆಂದು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿಯಿರುವಾಗಲೇ ಬಿ ರಿಪೋರ್ಟ್‌ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ತನಿಖೆ ಮುಕ್ತಾಯಗೊಳಿಸದೇ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ನಾಚಿಕೆಯಾಗಬೇಕು ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಈ ಕುರಿತು ಪ್ರತಿಕ್ರಿಯಿಸಿ, ಯಾವುದೇ ತನಿಖೆಯ ವರದಿಯನ್ನು ಪೊಲೀಸರು ಕೋರ್ಟ್ ಗೆ ಸಲ್ಲಿಸಿದಾಗ ದೂರುದಾರರಿಗೆ ನೋಟಿಸ್ ಕೊಡುವುದು ಸಾಮಾನ್ಯ ಪ್ರಕ್ರಿಯೆ. ಈ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ದೂರುದಾರರು ಅವರಿಗೆ ಲೋಕಾಯುಕ್ತ ನೊಟೀಸ್ ನೀಡಿದ್ದಾರೆ. ಅದರ ಅರ್ಥ ತನಿಖೆ ಪೂರ್ಣಗೊಂಡಿದೆ ಎಂದು ನೋಟಿಸ್ ಜಾರಿ ಮಾಡಿದ್ದಾರೆ. ಮುಂದಿನ ಪ್ರಕ್ರಿಯೆಗಳು ಏನಿದ್ದರೂ ಕೂಡ ನ್ಯಾಯಾಲಯದಲ್ಲಿ ನಡೆಯುತ್ತದೆ. ದೂರುದಾರರಿಗೆ ವರದಿ ಪ್ರತಿ ಸಿಕ್ಕಿದ್ಯೋ ಇಲ್ಲವೋ ಗೊತ್ತಿಲ್ಲ ನಾನಂತೂ ನೋಡಿಲ್ಲ. ಮಧ್ಯಂತರ ವರದಿ ಅಂತಿಮ ವರದಿ ಎಂಬ ಪ್ರಶ್ನೆ ಬರುವುದಿಲ್ಲ . ಕ್ರಿಮಿನಲ್ ಇನ್ವೆಸ್ಟಿಗೇಷನ್ ನಲ್ಲಿ ಮಧ್ಯಂತರ ಪೂರ್ಣ ವರದಿ ಎಂಬುದು ಬರುವುದಿಲ್ಲ. ಯಾವುದೇ ತನಿಖೆ ನಡೆದ ನಂತರ ಮುಂದಿನ ತನಿಖೆಗೆ ಅವಕಾಶ ಇರುತ್ತದೆ. ವರದಿ ಸಲ್ಲಿಸಿದಾಗ ಅಂತಿಮ ವರದಿಯನ್ನೇ ಸಲ್ಲಿಸಿರುತ್ತಾರೆ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯಗೆ ಬಿಗ್​ ರಿಲೀಫ್​- ಲೋಕಾಯುಕ್ತ ಸಂಸ್ಥೆ ಮುಡಾ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಸೇರಿದಂತೆ ಉಳಿದ ಇಬ್ಬರಿಗೂ ರಿಲೀಫ್ ಸಿಕ್ಕಂತಾಗಿದೆ. ಅದರಲ್ಲೂ ಮುಖ್ಯವಾಗಿ ಚುನಾವಣೆ ರಾಜಕೀಯ ಕೊನೆ ಹಂತದಲ್ಲಿ ಇರುವಾಗಲೇ ಈ ಮುಡಾ ಹಗರಣ ಮೈಮೇಲೆ ಬಂದಿದ್ದರಿಂದ ಸಿದ್ದರಾಮಯ್ಯ ಆತಂಕಕೊಂಡಿದ್ದರು. ಇದೀಗ ಸಿದ್ದರಾಮಯ್ಯನವರು ನಿಟ್ಟುಸಿರುಬಿಟ್ಟಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ