Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆಗೆ ಮುತ್ತಿಗೆ ಹಾಕಿದ ನಿವೇಶನ ಮತ್ತು ವಸತಿ ರಹಿತರು

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
 ವಸತಿಯಿಲ್ಲದವರ ಸರ್ವೆ ನಡೆಸಿ ವರದಿ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶಿಸಿ ಒಂದು ವರ್ಷಗಳಾಗಿದ್ದರೂ ನಗರಸಭೆ ಉದಾಸೀನ ಮಾಡುತ್ತಿರುವುದನ್ನು ವಿರೋಧಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಮಂಗಳವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರಸಭೆ ಎದುರು ಧಿಕ್ಕಾರಗಳನ್ನು ಕೂಗಿದರು.

ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಸಿ.ಪಿ.ಐ. ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ

ಕಳೆದ ವರ್ಷ ಮಾರ್ಚ್ ೨೯ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿದ್ದೆವು. ಆಗ ಸರ್ವೆ ನಡೆಸಿ ವರದಿ ಕೊಡುವಂತೆ ಸೂಚಿಸಿದ್ದರು. ಇಲ್ಲಿಯವರೆಗೂ ನಗರಸಭೆಯವರು ಗಮನ ಹರಿಸುತ್ತಿಲ್ಲ. ನಗರಸಭೆಗೆ ಅರ್ಜಿಗಳನ್ನು ಸಲ್ಲಿಸಿ ಒಂದು ವರ್ಷವಾಗಿದೆ. ಅಪ್‌ಲೋಡ್ ಮಾಡಿ ಓ.ಟಿ.ಪಿ. ಕೊಡುವತನಕ ಜಾಗ ಬಿಟ್ಟು ಕದಲುವುದಿಲ್ಲವೆಂದು ಪಟ್ಟು ಹಿಡಿದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸರ್ವರಿಗೂ ಸಮಪಾಲು, ಸಮಬಾಳು ಎಂದು ಹೇಳಿದ್ದಾರೆ. ಜನರ ತೆರಿಗೆಯಲ್ಲಿ ನಗರಸಭೆ ನಡೆಯುತ್ತಿದೆ. ಕೂಡಲೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿವೇಶನ ಮತ್ತು ವಸತಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ರಾಜೀವ್‌ಗಾಂಧಿ ವಸತಿ ನಿಗಮ ನಿಯಮಿತದ ನಿವೇಶನ ಮತ್ತು ವಸತಿ ರಹಿತರ ಸಮೀಕ್ಷಾ ಪಟ್ಟಿಗೆ ಸೇರ್ಪಡೆ ಮಾಡಬೇಕು. ನಿವೇಶನಕ್ಕೆ ಅಗತ್ಯ ಸರ್ಕಾರಿ ಭೂಮಿಯನ್ನು ಪ್ರತಿ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಗುರುತಿಸಬೇಕು.

ಈಗಾಗಲೆ ಮಂಜೂರಾಗಿರುವ ವಸತಿ ಯೋಜನೆಗಳಿಗೆ ಸರ್ಕಾರ ಅನುದಾನ ಮಂಜೂರು ಮಾಡಬೇಕು.

ಹಾಲಿ ಇರುವ ನಿವೇಶನದ ವಿಸ್ತೀರ್ಣವನ್ನು ಹೆಚ್ಚಿಸಿ ಅಂಗಳ ಮತ್ತು ಹಿತ್ತಲು ಇರುವಂತೆ ಕನಿಷ್ಟ ಒಂದು ಸಾವಿರ ಚದರ ಅಡಿ ನಿವೇಶನ ನೀಡಬೇಕು.

ವಸತಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಒದಗಿಸುವ ಸಹಾಯಧನ ಮೊತ್ತವನ್ನು ಕನಿಷ್ಟ ಐದು ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಜಿ.ಸಿ.ಸುರೇಶ್‌ಬಾಬು ಆಗ್ರಹಿಸಿದರು.

ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕಾಂ.ಸಾ.ತಿ.ಸುಂದರೇಶ್, ರಾಜ್ಯ ಉಪಾಧ್ಯಕ್ಷ ಕಾಂ.ಟಿ.ಆರ್.ಉಮಾಪತಿ, ತಾಲ್ಲೂಕು ಅಧ್ಯಕ್ಷ ಡಾ.ಬಿ.ಹೆಚ್. ಹನುಮಂತಪ್ಪ, ಕಾಂ.ಬಿ.ಬಸವರಾಜಪ್ಪ, ಕಾಂ.ಎಂ.ಬಿ.ಜಯದೇವಮೂರ್ತಿ, ಕಾಂ.ಈ.ಸತ್ಯಕೀರ್ತಿ, ಕಾಂ.ಎಸ್.ಬಾಬು ಸೇರಿದಂತೆ ವಸತಿ ರಹಿತ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನುಬಾಹಿರವಾಗಿ ಕಾರ್ಯದರ್ಶಿ ಮುಂದುವರಿಕೆ: ಹಿರಿಯೂರು TAPCMS ಆಡಳಿತ ಮಂಡಳಿಗೆ ಉಪ ನಿಬಂಧಕರ ಅಂತಿಮ ಎಚ್ಚರಿಕೆಹಿರಿಯೂರು ಉಪಚುನಾವಣೆ: “ಸ್ಥಳೀಯ ಸ್ವಾಭಿಮಾನ”ದ ಕೂಗು ಈಗ ಯಾಕೆ..?ಹಿರಿಯ ಪತ್ರಕರ್ತೆ ವಾಳ್ವೆಕರ್ ಚಿಕಿತ್ಸೆಗೆ 90 ಸಾವಿರ ಬಿಡುಗಡೆ ಮಾಡಿದ‌ ಸಿಎಂರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ತಮಿಳುನಾಡಿನಲ್ಲಿ ಬಿಜೆಪಿ ದಿನೇದಿನೇ ಬಲಿಷ್ಠವಾಗಿ ಬೆಳೆಯುತ್ತಿದೆ– ಆರ್. ಅಶೋಕ್ ವಿಶ್ವಾಸರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆಇಂಡೋ-ಡಚ್ ಅತ್ಯಾಧುನಿಕ ಹೈನುಗಾರಿಕೆ ತರಬೇತಿ ಕೇಂದ್ರ ಸ್ಥಾಪನೆ ​ ಜೆಡಿಎಸ್ ಪಕ್ಷದ ಹೋರಾಟಗಳು ಜನಪರವಾಗಿ ಇರುತ್ತವೆ-ನಿಖಿಲ್ಮಳೆ ಅವಾಂತರ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ವಾಗ್ದಾಳಿ ​ರೈತರನ್ನು ಒಕ್ಕಲೆಬ್ಬಿಸಬೇಡಿ: ಡಿ.ಕೆ.ಶಿ ಪಟಾಲಂ ವಿರುದ್ಧ ನಿಖಿಲ್ ಆಕ್ರೋಶ