Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನೇಮಕವಾಗಿರುವ ಸದಸ್ಯರುಗಳಾದ ಡಾ. ಆರತಿ ಕೃಷ್ಣ, ಎಫ್. ಹೆಚ್. ಜಕ್ಕಪ್ಪನವರ್, ಶಿವಕುಮಾರ್. ಕೆ ಮತ್ತು ರಮೇಶ್ ಬಾಬು ಅವರು ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಎಲ್ಲಾ ನೂತನ ಸದಸ್ಯರುಗಳಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.


ಪರಿಷತ್ ಸದಸ್ಯರಾಗಿ ನೇಮಕವಾಗಿರುವ ಡಾ. ಆರತಿ ಕೃಷ್ಣ, ಶಿವಕುಮಾರ್. ಕೆ ಮತ್ತು ರಮೇಶ್ ಬಾಬು ಅವರು ಭಗವಂತನ  ಹೆಸರಿನಲ್ಲಿ ಹಾಗೂ ಎಫ್. ಹೆಚ್. ಜಕ್ಕಪ್ಪನವರ್ ಅವರು ಭಗವಾನ್ ಬುದ್ದ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಮಂತ್ರಿ ಡಾ. ಜಿ. ಪರಮೇಶ್ವರ, ಕರ್ನಾಟಕ ವಿಧಾನ ಪರಿಷತ್ತಿನ ಸಭಾನಾಯಕರು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಎನ್. ಎಸ್ ಭೋಸರಾಜುವಕ್ಪ್ ಮತ್ತು ವಸತಿ ಸಚಿವ ಬಿ ಜಡ್ ಜಮೀರ್  ಅಹಮ್ಮದ್ ಖಾನ್, ಪಶುಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್,  ವಿಧಾನ ಪರಿಷತ್ತಿನ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಸೇರಿದಂತೆ, ಸಚಿವರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಗಣ್ಯರು ಹಾಗೂ ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಸದಸ್ಯರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ