Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನುಡಿದಂತೆ ನಡೆದಿರುವ, ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮದು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ "ಬೃಹತ್‌ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನ"ವನ್ನು ಉದ್ಘಾಟಿಸಿ, ಮಾತನಾಡಿದರು.


ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷಕ್ಕೆ ಒಟ್ಟು 22 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು.

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58,892 ಮಂದಿ ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22,819 ಅಭ್ಯರ್ಥಿಗಳ ಹೆಸರನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿದೆ.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1,20,563 ಅಭ್ಯರ್ಥಿಗಳು ಭಾಗವಹಿಸಿ, 24,391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48,232 ಅಭ್ಯರ್ಥಿಗಳ ಹೆಸರನ್ನು ಅಂತಿಮ‌ಸುತ್ತಿಗೆ ಮಾಡಲಾಗಿದೆ.

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28,000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ.

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ