Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಗೋಡಂಬಿ ಬೆಳೆಗೆ ಸೂಕ್ತ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ನೆಲ ಗೋಡಂಬಿ ಬೆಳೆಗೆ ಸೂಕ್ತವಾಗಿದೆ ಎಂದು ತೋಟಗಾರಿಕೆ ಮಹಾವಿದ್ಯಾಲಯ ಬೆಂಗಳೂರು ಜಿಕೆವಿಕೆ ನಿವೃತ್ತ ಡೀನ್ ಡಾ.ಕೆ.ಜಿ.ಎಸ್.ಸ್ವಾಮಿ ತಿಳಿಸಿದರು.


ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೆಂಗಳೂರು, ಗೋಡಂಬಿ ಮತ್ತು ಕೋಕೋ ಅಭಿವೃದ್ದಿ ನಿರ್ದೇಶನಾಲಯ

ಕೊಚಿನ್ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ಇವುಗಳ ಸಹಯೋಗದೊಂದಿಗೆ ಎ.ಪಿ.ಎಂ.ಸಿ. ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೋಡಂಬಿ ಬೆಳೆಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ವಾಣಿಜ್ಯ ಬೆಳೆಗಳಾದ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ, ಈರುಳ್ಳಿ ಇವುಗಳನ್ನೆ ಹೆಚ್ಚು ಬೆಳೆಯುವ ರೈತರು ಗೋಡಂಬಿ ಬೆಳೆಯತ್ತ ಗಮನ ಕೊಡಬೇಕು. ಇದೊಂದು ಲಾಭದಾಯಕ ಬೆಳೆ. ಬರಪೀಡಿತ ಪ್ರದೇಶ ಚಿತ್ರದುರ್ಗದ ಹವಾಗುಣ ಗೋಡಂಬಿ ಬೆಳೆಗೆ ಚೆನ್ನಾಗಿದೆ ಎಂದು ಹೇಳಿದರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಿವೃತ್ತ ಸಂಶೋಧನಾ ನಿರ್ದೇಶಕರಾದ ಡಾ.ಬಿ.ಸತ್ಯನಾರಾಯಣರೆಡ್ಡಿ ಮಾತನಾಡಿ ಗೋಡಂಬಿ ಚಿತ್ರದುರ್ಗ ಜಿಲ್ಲೆಯ ರೈತರಿಗೊಂದು ಪರ್ಯಾಯ ಬೆಳೆಯಾಗಿ ರೂಪುಗೊಳ್ಳುತ್ತ ಬರುತ್ತಿದೆ. ಕಡಿಮೆ ಖರ್ಚಿನಲ್ಲಿ ಬೆಳೆಯುವ ಗೋಡಂಬಿಗೆ ಹೆಚ್ಚಿನ ಕೂಲಿಕಾರರ ಅವಶ್ಯಕತೆಯೂ ಇಲ್ಲ. ಕೇವಲ ವಾಣಿಜ್ಯ ಬೆಳೆಗಳಿಗೆ ಮಾರು ಹೋಗುವ ಬದಲು ಗೋಡಂಬಿ ಬೆಳೆಯನ್ನು ಆಯ್ಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.

ಗೋಡಂಬಿ ತಜ್ಞ ಬೆಂಗಳೂರಿನ ಡಾ.ಗುರುಪ್ರಸಾದ್, ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ಹಿರಿಯ ವಿಜ್ಞಾನಿ ಡಾ.ರಾಜಶೇಖರ್, ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಡಿ.ಟಿ.ಶಿವಾನಂದಪ್ಪ, ಕಾರ್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ, ತೋಟಗಾರಿಕೆ ಮಹಾವಿದ್ಯಾಲಯ ಜಿ.ಕೆ.ವಿ.ಕೆ.ಬೆಂಗಳೂರಿನ ಡಾ.ಸುರೇಶ್ ಜಿ.ಜೆ, ಅಶೋಕ್ ಟಿ.ಎಲ್, ಟಿ.ಆರ್.ಯಶವಂತಕುಮಾರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ದೇವರಾಜ್, ವಿರುಪಾಕ್ಷಪ್ಪ, ಎನ್.ಕುಮಾರ್ ಇನ್ನು ಅನೇಕರು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.


ಗೋಡಂಬಿ ಬೆಳೆಯ ಕೊಯ್ಲೋತ್ತರ ನಿರ್ವಹಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಕುರಿತು ಗೋಡಂಬಿ ಬೆಳೆಗಾರರು ಕೇಳಿದ ಪ್ರಶ್ನೆಗಳಿಗೆ ಗೋಡಂಬಿ ತಜ್ಞರು ಉತ್ತರಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ