Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪಿದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. 

ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಿದೆ ಎಂದು ವಿಜಯೇಂದ್ರ ಕಿಡಿಕಾರಿದರು.


ಮತ್ತೊಂದು ಕಡೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿದ್ದಲ್ಲ ಎಂದು ಉಪಮುಖ್ಯಮಂತ್ರಿಗಳು ಹೇಳುತ್ತಾರೆ, ಅದೇ ಸಾಂಸ್ಕೃತಿಕ ನಗರಿಯ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಉದ್ಯಮಿ ದಂಪತಿಗಳ ರೀಲ್ಸ್ ಮಾಡಲು ಅವಕಾಶ ಮಾಡಿಕೊಟ್ಟು ಸಾಂಸ್ಕೃತಿಕ ನಗರಿಯ ಘನತೆಯನ್ನು ಕುಗ್ಗಿಸುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ನಾಡಿನ ಸಂಸ್ಕೃತಿಯನ್ನು ಅವಮಾನಿಸುವುದು ಭಾರತೀಯ ಕಾಂಗ್ರೆಸ್ ಸರ್ಕಾರದ ಒಂದು ಭಾಗವಾಗಿದೆ.

ಗಣೇಶೋತ್ಸವದ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅವಧಿಯನ್ನು ವಿಸ್ತರಿಸಬೇಕು ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೇ ಚರ್ಚೆಯಾಗಿ ಸರ್ಕಾರ ಸಮ್ಮತಿಯನ್ನೂ ವ್ಯಕ್ತಪಡಿಸಿದೆ. ಆದಾಗ್ಯೂ ಪೊಲೀಸರು ಗಣೇಶೋತ್ಸವದ ಮೇಲೆ ಕೆಂಗಣ್ಣು ಬೀರುತ್ತಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದು ವಿಜಯೇಂದ್ರ ಹರಿಹಾಯ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ