Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡವರು, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅರಸು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು
, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 43ನೇ ಪುಣ್ಯಸ್ಮರಣೆ ಅಂಗವಾಗಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರ ಪುಣ್ಯತಿಥಿಯಂದು  ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿದ್ದೇನೆ.

ಅರಸು ಅವರಿಂದಾಗಿ ಬಡತನ ನಿರ್ಮೂಲನೆ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು.

ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ, ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಸಿಎಂ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ