Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಹುದ್ದೆ ಖಾಲಿಯಿಲ್ಲ, ನಾನೇ ಮುಂದುವರೆಯುತ್ತೇನೆ: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.

ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ.

ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಕ್ರಮ ಖಂಡಿತ : ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಎಸ್ ಐ ಟಿ ಕ್ರಮಕ್ಕೆ ಸೂಚನೆ : ಪಿಎಸ್ ಐ ಪರೀಕ್ಷಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.


ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಖಾಲಿಯಿಲ್ಲ :
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ