Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆ ಬಹುತೇಕ ಹೆಚ್ಚಳ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಶೇ. 83.61 ರಷ್ಟು ಮತದಾರರು ವಿಶ್ವಾಸಾರ್ಹತೆ ಹೊಂದಿರುವುದಾಗಿ ತಿಳಿಸಿರುವುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ.


ಇವಿಎಂ ಯಂತ್ರಗಳ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ರಾಜ್ಯ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ಅತಿ ಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.


ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಸಮೀಕ್ಷೆ ನಡೆಸಿದೆ.

ಕರ್ನಾಟಕದ ಮತದಾರರ ಪೈಕಿ ಶೇ 83.61 ರಷ್ಟು ಮಂದಿ ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವುದು ಅಧ್ಯಯನದಿಂದ ತಿಳಿದುಬಂದಿದೆ. ಕಲಬುರಗಿಯಲ್ಲಿ ಶೇಕಡ 94.8ರಷ್ಟು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶೇಕಡ 88.59ರಷ್ಟು ಮತದಾರರು ಇವಿಎಂ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತಯಂತ್ರಗಳನ್ನು ನಿಖರತೆಯ ಕುರಿತು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. 2025ರ ಆಗಸ್ಟ್‌ ನಲ್ಲಿ ಸಮೀಕ್ಷಾ ವರದಿ ಸಲ್ಲಿಸಲಾಗಿತ್ತು ಎಂಬುದು ಮೂಲಗಳಿಂದ ತಿಳಿದುಬಂದಿದೆ.


ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ಏನು?
ಸಚಿವ ಪ್ರಿಯಾಂಕ್ ಖರ್ಗೆ ಅವರು ಇವಿಎಂ ಕುರಿತು ನಡೆಸಿದ ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆಯೇ ಪ್ರಶ್ನೆ ಮಾಡಿದ್ದಾರೆ. ಸಮೀಕ್ಷೆ ನಡೆಸಿದ ಏಜೆನ್ಸಿ ಬಗ್ಗೆ ಪ್ರಸ್ತಾಪ ಮಾಡಿರುವ ಅವರು, ರಾಜ್ಯ ಸರ್ಕಾರವು ಅದನ್ನು ಆ ಸಮೀಕ್ಷೆಯನ್ನು ಅನುಮೋದಿಸಿಲ್ಲ ಎಂದು ತಿಳಿಸಿದ್ದಾರೆ.


ರಾಜ್ಯ ಸರ್ಕಾರ ಮಾಡಿಸಿದ ಸಮೀಕ್ಷೆಯೇ ಅಲ್ಲ. ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಸಮೀಕ್ಷೆಗಾಗಿ ಬಾಲಕೃಷ್ಣನ್ ಅಥವಾ ಬಾಲಸುಬ್ರಮಣಿಯನ್ ನಡೆಸುತ್ತಿರುವ ಎನ್​ಜಿಒದ ಸಹಾಯ ಕೋರಲಾಗಿತ್ತು. ನನಗಿರುವ ಮಾಹಿತಿ ತಪ್ಪಲ್ಲವೆಂದಾದರೆ, ಬಾಲಕೃಷ್ಣನ್ ಅವರು ಪ್ರಧಾನ ಮಂತ್ರಿಯವರಿಗಾಗಿ ಬರೆದ ಪುಸ್ತಕದ ಲೇಖಕರಾಗಿದ್ದಾರೆ ಮತ್ತು ಪ್ರಧಾನ ಮಂತ್ರಿ ಕಚೇರಿಯೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡುತ್ತಾರೆ. ಅಂಥವರಿಂದ ನೀವು ಏನನ್ನು ನಿರೀಕ್ಷಿಸುತ್ತೀರಿ ಎಂದು ಖರ್ಗೆ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.


ಬಿಜೆಪಿ ವಾಗ್ದಾಳಿ:
ಭಾರತೀಯ ಕಾಂಗ್ರೆಸ್ ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಸದಾ ವೋಟ್ ಚೋರಿ ಆರೋಪ ಮಾಡುತ್ತಿರುವ ಮತ್ತು ಸದಾ ಇವಿಎಂ ಬಗ್ಗೆ ಪ್ರಶ್ನಿಸುತ್ತಿರುತ್ತಾರೆ. ಕರ್ನಾಟಕದಲ್ಲಿ ನಡೆಸಿದ ಸಮೀಕ್ಷಾ ವರದಿನ್ನು ಮುಂದಿಟ್ಟುಕೊಡು ಬಿಜೆಪಿ ತಿರುಗೇಟು ನೀಡಿದೆ.


ಪ್ರತಿ ಬಾರಿಯ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಾಗ ರಾಹುಲ್ ಗಾಂಧಿ ಇವಿಎಂ ಹಾಗೂ ಚುನಾವಣಾ ಆಯೋಗವನ್ನು ದೂಷಿಸುತ್ತಾರೆ. ಹಾಗೆ ಮಾಡಿದಾಗಲೆಲ್ಲ ಅವರ ಆರೋಪಗಳು ಸುಳ್ಳೆಂಬುದಕ್ಕೆ ಪುರಾವೆಗಳು ಸಿಗುತ್ತವೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ ಟೀಕಾಪ್ರಹಾರ ಮಾಡಿದ್ದಾರೆ.


ಕರ್ನಾಟಕದಲ್ಲಿ ಜನರು ಇವಿಎಂಗಳನ್ನು ಸುರಕ್ಷಿತವೆಂದು ಪರಿಗಣಿಸುತ್ತಾರೆ ಮತ್ತು ಅವುಗಳನ್ನು ನಂಬುತ್ತಾರೆ ಎಂದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ.


ಪ್ರತಿ ಬಾರಿ ರಾಹುಲ್ ಗಾಂಧಿ ಅವರು ಸೋಲು ಕಂಡಾಗ ಇವಿಎಂಗಳನ್ನು ಅಥವಾ ವ್ಯವಸ್ಥೆಯನ್ನು ದೂಷಿಸಿದಾಗ ಅವರಿಗೆ ವಾಸ್ತವದ ಅರಿವು ಮೂಡಿಸುವಂಥ ವಿದ್ಯಮಾನಗಳು ನಡೆಯತ್ತವೆ ಎಂದು ಶೆಹಜಾದ್ ಪೂನವಾಲ ಹೇಳಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ