Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ-ಪುಟ್ಟಣ್ಣ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ
ರಾಜ್ಯದ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಹೋರಾಟ ಮಾಡೋಣ ಎಂದು ವಿಧಾನ ಪರಿಷತ್  ಸದಸ್ಯ ಪುಟ್ಟಣ್ಣ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಶ್ರೀ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರ ಸಮಾಜದ ಪ್ರಮುಖ ಅಂಗವಾಗಿದ್ದೂ, ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. ಅವರ ಬೇಡಿಕೆಗಳಿಗೆ ಸ್ಪಂದನೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ಶಿಕ್ಷಕ ಕ್ಷೇತ್ರದ ಪ್ರತಿನಿಧಿಯಾದ ನಾನು ಸದಾ ನಿಮ್ಮ ಜತೆಯಲ್ಲಿ ಇರುತ್ತೇನೆ. ಜನರು ದೇವಾಲಯಗಳನ್ನು ಕಟ್ಟುವ ಉತ್ಸಾಹದಂತೆ ಶಾಲಾ ಕಾಲೇಜುಗಳನ್ನು ಕಟ್ಟುವ  ಕಡೆಗೆ ಗಮನ ನೀಡಬೇಕಾಗಿದೆ ಎಂದರು.

 ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಿ.ಕೆ.ಸರಸ್ವತಿ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ದ ಗೊಳಿಸಲು ಸ್ಮಾರ್ಟ್  ಕ್ಲಾಸ್ ತರಗತಿಗಳ ಅಗತ್ಯವಿದೆ. ಆದ್ದರಿಂದ ವಿಧಾನ ಪರಿಷತ್ ಸದಸ್ಯರಾದ  ಪುಟ್ಟಣ್ಣ ಅವರು ತಮ್ಮ ಶಾಸಕರ ಅನುದಾನದಲ್ಲಿ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ನಿರ್ಮಿಸಿ ಕೊಡಬೇಕೆಂದರು.

 ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಬೋರಪ್ಪ ಮಾತನಾಡಿ, ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಇಡಿ ರಹಿತ ಉಪನ್ಯಾಸಕರುಗಳಿಗೆ ವೇತನ ಸಹಿತವಾಗಿ ಬಿ.ಇಡಿ ವ್ಯಾಸಂಗ ಮಾಡಲು ಸರ್ಕಾರ ಅನುಮತಿ ನೀಡಬೇಕಾಗಿದೆ. ನೂರಾರು ಮಂದಿ ಬಿ.ಇಡಿ ರಹಿತ ಉಪನ್ಯಾಸಕರು ಪ್ರಸ್ತುತ ಆತಂಕದ ಸ್ಥಿತಿಯಲ್ಲಿದ್ದಾರೆ.  ವಿಧಾನ ಪರಿಷತ್ ಸದಸ್ಯರು ಬಿ.ಇಡಿ ರಹಿತರ ಸಮಸ್ಯೆ ಬಗೆಹರಿಸಲು ಸಹಕಾರ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್.ವೇಣುಗೋಪಾಲ್, ದೊಡ್ಡಬಳ್ಳಾಪುರ ತಾಲ್ಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸುಬ್ರಹ್ಮಣ್ಯ, ಕಾರ್ಯದರ್ಶಿ ರಮೇಶ್ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ರಾಜಶೇಖರ್, ಕಾರ್ಯದರ್ಶಿ ಧನಂಜಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಆರ್.ನಾರಾಯಣಸ್ವಾಮಿ,

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು, ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಶಿಕ್ಷಕ‌ಮತ್ತು‌ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳಾದ ರಾಮಚಂದ್ರಗೌಡ, ಮುನಿಕೃಷ್ಣಪ್ಪಅರುಣ್ ಕುಮಾರ್, ಜೈಕುಮಾರ್, ಬಿ.ಆರ್.ನರಸಿಂಹಮೂರ್ತಿದಾಕ್ಷಾಯಿಣಿ, ಟಿ.ಕೆ.ಪ್ರಕಾಶ್, ಚಿಕ್ಕಗೌಡ, ಎ.ವಿ.ಚಂದ್ರಪ್ಪ, ಬಸವಲಿಂಗಯ್ಯ, ಮಹೇಶ್, ಸರಸ್ವತಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ