Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

​ ವಿಶ್ವ ಯೋಗ ದಿನ ಜೂನ್ 21 ರ ರಹಸ್ಯ

ಚಂದ್ರವಳ್ಳಿ ನ್ಯೂಸ್, ಉಡುಪಿ:
 ಮತ್ತೊಮ್ಮೆ ವಿಶ್ವ ಯೋಗ ದಿನಾಚರಣೆ ಬಂದಿದೆ ಈ ದಿನ ಅತ್ಯಂತ ಶ್ರೇಷ್ಠವಾದ ದಿನ ಜೂನ್‌ 21 ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾತಿ ದಿನವೆಂದು ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. 

ದಕ್ಷಿಣ ಯಾನವನ್ನು ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ಧೀವ್ಯ ಶಕ್ತಿ ಉದ್ದೀಪನಗೊಳಿಸುತ್ತದೆ ಎಂದು ಈ ದಿನವನ್ನು ನಂಬಲಾಗಿದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ ನಂಬಿಕೆಯಿದೆ. ಬೇಸಿಗೆ ಆಯನ ಸಂಕ್ರಾತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ.

Advertisement

 ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ಭಾರತೀಯರಿಗೆ ಪ್ರಕೃತಿಗೆ ಗೌರವ ಸಲ್ಲಿಸುವುದು, ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಹಾಗೆಯೇ ಪ್ರಕೃತಿಯ ಕೊಡುಗೆಯನ್ನು, ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ ಎಂದು ಹೇಳಿದ್ದನ್ನು ನಾವು ನೆನಪಿಸಬಹುದು.

 ಈ ದಿನದಂದು ಯೋಗವನ್ನು ಅಭ್ಯಾಸಸುವ ಮೂಲಕ ನಮ್ಮ ಆರೋಗ್ಯ ಜೊತೆಗೆ ಮನಸ್ಸನ್ನು ಉತ್ತಮಗೊಳಿಸಬಹುದಾಗಿದೆ.

 ಯೋಗದ ಗುರಿ :-
ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು
, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ.

ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಾಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಸಾಮಾಜಿಕ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

 ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ.

ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ. ಈ ವರ್ಷದ ಅಧಿಕೃತ ಥೀಮ್ "ಆರೋಗ್ಯಕರ ವೃದ್ಧಿಗಾಗಿ ಯೋಗ" ಎಂಬುದಾಗಿದೆ. ವಯಸ್ಸಾಗುತ್ತಿದ್ದಂತೆ ಜನರು ದೈಹಿಕ ನಮ್ಯತೆ, ಮಾನಸಿಕ ನೆಮ್ಮದಿ ಮತ್ತು ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಲು ಯೋಗ ಹೇಗೆ ಸಹಕಾರಿಯಾಗಿದೆ ಎಂಬುದನ್ನು ಈ ಧ್ಯೇಯ ವಾಕ್ಯ ತಿಳಿಸುತ್ತದೆ.

 ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಲಿ :
 ವರ್ಷದಲ್ಲಿ ಒಂದು ದಿನ ಯೋಗ ಮಾಡಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟರೆ ಸಾಲದು ಬದಲಾಗಿ ಪ್ರತಿದಿನವೂ ಯೋಗ ದಿನವಾಗಬೇಕು ನಮ್ಮ ದಿನದಲ್ಲಿ ಕನಿಷ್ಠ ಒಂದು ಗಂಟೆಯನ್ನು ಯುವಕವಾಗಿ ನೀಡಿದ್ದಲ್ಲಿ ನಮ್ಮ ಆರೋಗ್ಯ (ಮಾನಸಿಕ ಮತ್ತು ಭೌತಿಕ ) ವನ್ನು ಉತ್ತಮವಾಗಿಸಬಹುದು.

 ಹೀಗಾಗಿ ಈ ವರ್ಷದ ಯೋಗ ದಿನದಲ್ಲಿ ನಾವೆಲ್ಲರೂ ಸಂಕಲ್ಪ ಮಾಡೋಣ ಪ್ರತಿದಿನ ಯೋಗ ನಮ್ಮ ಜೀವನದ ಭಾಗವಾಗಲಿ.
ಲೇಖನ: ರಾಘವೇಂದ್ರ ಪ್ರಭು ಕರ್ವಾಲು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು