Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರು ಮತ್ತು ಕಾಂಗ್ರೆಸ್ ಸಂಘರ್ಷಕ್ಕೆ ಎಡೆ ಮಾಡಿದ ಅಧಿವೇಶನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನರೇಗಾ ಯೋಜನೆ ಹೆಸರು ಬದಲಾಯಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ.
ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ
, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಪೂರ್ತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.

ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ 11 ಅಂಶಗಳನ್ನು ತೆಗೆಯುವಂತೆ ರಾಜ್ಯಪಾಲರು, ಬುಧವಾರವೇ ಸೂಚಿಸಿದ್ದರು. ಆದರೆ, ಅದನ್ನು ಸರ್ಕಾರ ನಿರಾಕರಿಸಿತ್ತು. ಹೀಗಾಗಿ ರಾಜ್ಯಪಾಲರು ಭಾಷಣ ಮಾಡಲು ಬರುವುದು ಅನುಮಾನ ಎಂದು ಹೇಳಲಾಗಿತ್ತು. ಒಂದು ವೇಳೆ ರಾಜ್ಯಪಾಲರು ವಿಧಾನಸಭೆಗೆ ಬಾರದಿದ್ದರೆ ಮುಂದಿನ ಕಾನೂನು ಕ್ರಮಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಕ್ಕೆ ಕೂಡ ಸರ್ಕಾರ ಸಿದ್ಧತೆ ನಡೆಸಿತ್ತು.

ರಾಜ್ಯಪಾಲರ ಮಾತೇನು?
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು, ಆಡಳಿತಾರೂಢ ಕಾಂಗ್ರೆಸ್ ನಾಯಕರ ನಿರೀಕ್ಷೆಗಳನ್ನು ಹುಸಿ ಮಾಡಿ ವಿಧಾನಸಭೆಗೆ ಬಂದು ಭಾಷಣ ಆರಂಭಿಸಿದರು. ಸರ್ಕಾರ ಸಿದ್ಧಪಡಿಸಿದ ಭಾಷಣದ ಮೊದಲ ಮತ್ತು ಕೊನೆಯ ಪ್ಯಾರದ ಒಂದೆರಡು ಲೈನ್ ಮಾತ್ರ ಓದಿ, ಶುಭಾಶಯ ಕೋರಿ ಸರ್ಕಾರಕ್ಕೆ ಶಾಕ್ ಕೊಟ್ಟ ಬಳಿಕ ಅಲ್ಲಿಂದ ನಿರ್ಗಮಿಸಿದರು.
ವಿಧಾನಸಭೆಯಿಂದ ರಾಜ್ಯಪಾಲರು ನಿರ್ಗಮಿಸುತ್ತಿದ್ದಂತೆಯೇ ಅವರನ್ನು ತಡೆಯಲು ಎಂಎಲ್‌ಸಿ ಬಿಕೆ ಹರಿಪ್ರಸಾದ್ ಮುಂದಾದರು. ಆಗ ಹೈಡ್ರಾಮಾ ನಡೆಯಿತು. ಕಾಂಗ್ರೆಸ್ ಪಕ್ಷದ ಶಾಸಕರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.


ಈ ವೇಳೆ, ವಿಧಾನಸಭೆಯಲ್ಲಿ ಹೈಡ್ರಾಮವೇ ನಡೆಯಿತು. ನಂತರ ಸ್ಪೀಕರ್ ಯುಟಿ ಖಾದರ್, ಸಭಾಪತಿ ಹೊರಟ್ಟಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನು ಬೀಳ್ಕೊಟ್ಟರು. ರಾಜ್ಯಪಾಲರು ಕಾರು ಹತ್ತಿದ ಕೂಡಲೇ, ‘ಸಂವಿಧಾನ ಧಿಕ್ಕರಿಸಿದ ರಾಜ್ಯಪಾಲರಿಗೆಎಂದು ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಸೇರಿ ಇತರರು ಘೋಷಣೆ ಕೂಗಿದರು.

ಅಧಿವೇಶನದ ಕಥೆ ಏನು?
ರಾಜ್ಯಪಾಲರು ಮೊದಲ ಮತ್ತು ಕೊನೆ ಪ್ಯಾರಾ ಮಾತ್ರ ಓದಿದ ಕಾರಣ ಅವರು ಭಾಷಣ ಓದಿದ್ದಾರೆ ಎಂದೇ ಭಾವಿಸಲಾಗುತ್ತದೆ. ಹೀಗಾಗಿ ಅಧಿವೇಶನ ನಡೆಯುವುದಕ್ಕೆ ಸಮಸ್ಯೆ ಎದುರಾಗದು ಎಂದು ಮೂಲಗಳು ತಿಳಿಸಿವೆ. ಸಂವಿಧಾನದ ಪ್ರಕಾರ ಭಾಷಣ ಮಾಡುವುದು ರಾಜ್ಯಪಾಲರ ಕರ್ತವ್ಯ. ಆಡಳಿತ ರೂಢರು ಸಿದ್ಧ ಮಾಡಿ ಭಾಷಣವನ್ನು ರಾಜ್ಯಪಾಲರು ಓದುವಂತಿಲ್ಲ. ನರೇಗಾ ಬದಲಿ ವಿಬಿ ಜಿ ರಾಮ್​ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಹೊಸ ಕಾಯ್ದೆಯಲ್ಲಿ ರಾಜ್ಯ ಸರ್ಕಾರ ಅಧಿಕಾರವನ್ನು ಕಿತ್ತುಹಾಕಿದ್ದಾರೆ. ವಿಪಕ್ಷಗಳು ಉದ್ದೇಶಪೂರ್ವಕವಾಗಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ