Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೂರದೃಷ್ಟಿ ಇಲ್ಲದ ಸಿದ್ದರಾಮಯ್ಯ ಸರ್ಕಾರ, ಜನರ ನೆಮ್ಮದಿ ಕಸಿಯುತ್ತಿದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಿಸ್ಟರ್‌ಡಿ.ಕೆ ಶಿವಕುಮಾರ್ ಅವರೇ
ಇದೇನಾ ನಿಮ್ಮ ಕನಸಿನ "ಬ್ರ್ಯಾಂಡ್‌ಬೆಂಗಳೂರು"? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಎರಡು ವರ್ಷ ಕಳೆದರೂ ನಿಮ್ಮ ಸಾಧನೆ ಕಳಪೆ ಎಂಬುದು ಜಗಜ್ಜಾಹೀರಾಗಿದೆ. ತೇಲುತ್ತಿರುವ ಬೆಂಗಳೂರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯತೆಯನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಬ್ರ್ಯಾಂಡ್‌ಬೆಂಗಳೂರು ಹೆಸರಲ್ಲಿ ರಿಯಲ್‌ಎಸ್ಟೇಟ್‌ಮಾಫಿಯಾಗೆ ಒಳ್ಳೆ ಫಸಲು ತರುವ ಯೋಜನೆಯಾಗಿ ಮಾರ್ಪಟ್ಟಿದೆ.  ಬೆಂಗಳೂರು ಹೆಸರಿನಲ್ಲಿ ಸಾವಿರಾರು ಕೋಟಿ ದುಡ್ಡು ಹೊಡೆದಿದ್ದೇ ಕಾಂಗ್ರೆಸ್‌ಸರ್ಕಾರದ 2 ವರ್ಷಗಳ ಸಾಧನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. 

ಒಂದೆರಡು ಗಂಟೆ ಸುರಿದ ಮಳೆಗೆ ಸಿಲಿಕಾನ್‌ಸಿಟಿ ನೀರಿನಲ್ಲಿ ಮುಳುಗಿದ್ದು, ಮನೆಗಳು, ಗೋಡೆಗಳು ಕುಸಿದು ಜೀವಹಾನಿಯಾಗಿದೆ. ಹಲವು ಪ್ರದೇಶಗಳು ಜಲಾವೃತವಾಗಿ ನಾಗರಿಕರು ಜಾಗರಣೆ ಮಾಡುತ್ತಾ, ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.

ದೂರದೃಷ್ಟಿ ಇಲ್ಲದ ಸಿದ್ದರಾಮಯ್ಯ ಸರ್ಕಾರ, ರಾಜಧಾನಿಯ ಜನರ ನೆಮ್ಮದಿಯನ್ನು ದಿನೇ ದಿನೇ ಕಸಿಯುತ್ತಿದೆ. ಜನಸಾಮಾನ್ಯರು ಬದುಕಲು ಮಾಡಬೇಕಾದ ಕನಿಷ್ಠ ಮೂಲ ಸೌಕರ್ಯವನ್ನು ಕಲ್ಪಿಸುವಲ್ಲಿ ನಿಮ್ಮ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಜಲಾವೃತವಾಗಿರುವ ರಸ್ತೆಗಳುಗುಂಡಿ ಬಿದ್ದ ರಸ್ತೆಗಳು, ಎಲ್ಲೆಂದರಲ್ಲಿ ತುಂಬಿರುವ ಕಸದ ರಾಶಿ ಡಿಕೆಶಿಯ ಅಸಮರ್ಥತೆಯನ್ನು ಸಾಕ್ಷಿಕರಿಸುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ