Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆತ್ಮಕ್ಕೆ ದೇಶ-ಕಾಲ-ನಾಮ-ರೂಪಗಳಿಲ್ಲ: ಮಾತಾಜೀ ತ್ಯಾಗಮಯೀ 

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪ್ರತಿಯೊಬ್ಬರಲ್ಲಿಯೂ ಇರುವ ಆತ್ಮ ಸ್ವರೂಪಕ್ಕೆ ದೇಶ-ಕಾಲ-ನಾಮ-ರೂಪಗಳಿಲ್ಲ
, ಅಂತಹ ಆತ್ಮವನ್ನು ನಮ್ಮಲ್ಲೇ ಕಂಡುಕೊಳ್ಳುವುದು ಮಾನವ ಜನ್ಮದ ಮುಖ್ಯ ಉದ್ದೇಶ ಎಂದು ಚಳ್ಳಕೆರೆ ಶ್ರೀಶಾರದಾಶ್ರಮದ ಅಧ್ಯಕ್ಷ ಮಾತಾಜೀ ತ್ಯಾಗಮಯೀ ತಿಳಿಸಿದರು.


ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು "ಆತ್ಮತತ್ತ್ವ"ದ ಬಗ್ಗೆ ವಿಶೇಷ ಪ್ರವಚನ ನೀಡಿದರು. 

ಅಜ್ಞಾನದಿಂದ ತಾನು ದೇಹ ಮಾತ್ರ ಎಂದು ಭಾವಿಸುವ ಮನುಷ್ಯನ ಒಳಗೆ ಆತ್ಮಚೈತನ್ಯವಿದೆ. ಅದನ್ನು ತಿಳಿದುಕೊಂಡರೆ ಬದುಕಿನ ಸಕಲ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ.ಸದಾ ಆತ್ಮತತ್ತ್ವದ ಚಿಂತನೆ ಮಾಡುತ್ತಿರಬೇಕು ಎಂದು ಅವರು ಸಲಹೆ ನೀಡಿದರು.


ಸತ್ಸಂಗದ ಆರಂಭದಲ್ಲಿ ವಿಶೇಷ ಭಜನೆಯನ್ನು ಶ್ರೀಶಾರದಾಶ್ರಮದ ಸದ್ಭಕ್ತರು ನಡೆಸಿಕೊಟ್ಟರೆ ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಸತ್ಸಂಗದಲ್ಲಿ ಎಂ ಗೀತಾ ನಾಗರಾಜ್, ವನಜಾಕ್ಷಿ ಮೋಹನ್, ಯತೀಶ್ ಎಂ ಸಿದ್ಧಾಪುರ, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಚೇತನ್, ಸುಧಾಮಣಿ, ಕವಿತಾ ಗುರುಮೂರ್ತಿ, ರಶ್ಮಿ ಪಂಡಿತಾರಾಧ್ಯ, ಪುಷ್ಪಲತಾ, ಸುಮನಾ, ಕಾವೇರಿ ಸುರೇಶ್, ಗೀತಾ ವೆಂಕಟೇಶರೆಡ್ಡಿ, ಶೃಜನಿ, ಸಿ.ಎಸ್.ಭಾರತಿ ಚಂದ್ರಶೇಖರ್, ಜಿ ಯಶೋಧಾ ಪ್ರಕಾಶ್ ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ