Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿಗೆ ತಡೆಯೊಡ್ಡಿದ ರಾಜ್ಯ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.


ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ತಾತ್ಕಾಲಿಕ ತಡೆ ನೀಡಿ ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯಲ್ಲೇನಿದೆ?
ದಿನಾಂಕ 18.09.2024 ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1
D) ನಂತರ (1E) ಯನ್ನು ಸೇರ್ವಡೆಗೊಳಿಸಿ,

ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ವಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃ೦ದ ಬಲದಲ್ಲಿ ಶೇ 2 ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಆದರೆ, ಸರ್ಕಾರವು ಸೆಪ್ಟೆಂಬರ್ 18 ರ ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2 ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ