Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಎಸ್‌ಟಿ ಸಂಗ್ರಹಣೆಯಲ್ಲಿ ದೇಶಕ್ಕೆ ರಾಜ್ಯ ಪ್ರಥಮ ಬರಬೇಕು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು
, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.


ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು.

ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿ ನಿಗದಿಪಡಿಸಲಾಗಿದ್ದು, ಹೆಚ್ಚುವರಿ 17,000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಈ ವರ್ಷ 4,09,000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ ನಾವು ಈ ಸವಾಲನ್ನು ಯಶಸ್ವಿಯಾಗಿ ಗೆದ್ದಿದ್ದೇವೆ. ಸರ್ಕಾರದ ಈ ಯಶಸ್ಸಿನ ಹಿಂದೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ ಎಂದರು.

ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ  ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ.  ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದರು.

ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ