Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Technology News

ವಿದ್ಯಾರ್ಥಿಗಳ ಆಲೋಚನೆ ಪ್ರಬುದ್ಧತೆಯಿಂದ ಕೂಡಿದೆ-ಡಾ.ಭರತ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು
ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಮೂರನೇ ವರ್ಷದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಮಿನಿ ಪ್ರಾಜೆಕ್ಟ್‌ಗಳ ಪ್ರದರ್ಶನ ಟೆಕ್ನೋವಿಷನ್ ಮಿನಿ ಪ್ರಾಜೆಕ್ಟ್ ಎಕ್ಸ್‌ಪೋ-೨0೨೪ನ್ನು ಸೋಮವಾರ ಆಯೋಜಿಸಲಾಗಿತ್ತು.

ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ  ಡಾ. ಭರತ್ ಪಿ ಬಿ, ವಿದ್ಯಾರ್ಥಿಗಳಲ್ಲಿರುವ ತಾಂತ್ರಿಕ ಕೌಶಲ್ಯತೆ ಹೊರತರಲು ವಿದ್ಯಾರ್ಥಿಗಳೇ ಸ್ವತಃ ಮಿನಿ ಪ್ರಾಜೆಕ್ಟ್‌ಗಳನ್ನು ಸಿದ್ಧಪಡಿಸುವ ಯೋಜನೆ ನೀಡಲಾಗುತ್ತದೆ. ವಿದ್ಯಾರ್ಥಿಗಳು ೨೩ ಉಪಯೋಗಿಕ ಮಿನಿ ಪ್ರಾಜೆಕ್ಟ್ ಸಿದ್ಧ ಪಡಿಸಿದ್ದಾರೆ. 

ಸಮಾಜಕ್ಕೆ, ರೋಗಿಗಳಿಗೆ, ರೈತರಿಗೆ, ಮಹಿಳೆಯರ ರಕ್ಷಣೆಗೆ ಅನುಕೂಲವಾಗುವಂತಹ ಪ್ರಾಜೆಕ್ಟಗಳನ್ನು ಸಿದ್ಧಪಡಿಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳ ಆಲೋಚನೆ ಪ್ರಬುದ್ಧತೆಯಿಂದ ಕೂಡಿದೆ. ಇದಕ್ಕೆ ಅನುಗುಣವಾಗಿ ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಸಹ ವಿದ್ಯಾರ್ಥಿಗಳಿಗೆ ಸಮಾಜಮುಖಿ ಪ್ರಾಜೆಕ್ಟ್‌ಗಳನ್ನು ಸಿದ್ಧಪಡಿಸಲು ಪ್ರೋತ್ಸಾಹ ನೀಡಿದ್ದಾರೆ ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ಉಪನ್ಯಾಸಕ             ಪ್ರೊ. ಬಿ.ಎಂ.ಹಾಲಸ್ವಾಮಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸಿದ್ಧೇಶ್ ಕೆ ಬಿ, ಕಾರ್ಯಕ್ರಮ ಸಂಚಾಲಕರುಗಳಾದ ಪ್ರೊ.ರಘು ಎಸ್ಪ್ರೊ.ಸುದರ್ಶನ್ ಎಂ.ಕೆ., ಹಾಗೂ ಉಪನ್ಯಾಸಕ ವರ್ಗದವರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿವಿಧ ಪಾಲಿಟೆಕ್ನಿಕ್, ಕಾಲೇಜುಗಳ ವಿದ್ಯಾರ್ಥಿಗಳು ಪ್ರದರ್ಶನಕ್ಕೆ ಆಗಮಿಸಿ ಪ್ರಾಜೆಕ್ಟ್‌ಗಳನ್ನು ವೀಕ್ಷಿಸಿ ಉಪಯುಕ್ತ ಮಾಹಿತಿ ಪಡೆದುಕೊಂಡರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು