Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಎಲ್ಲಾ ಸಮುದಾಯದವರಿಗೂ ಸೌಲಭ್ಯ ಕಲ್ಪಿಸಿದ್ದಾರೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ಕೈʼ ಹಿಡಿಯಲಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವುದು ನಿಶ್ಚಿತ. ವಿಧಾನಸಭೆಯಲ್ಲಿ ನಮ್ಮ ಶಾಸಕರ ಸಂಖ್ಯೆ 138ರಿಂದ 140ಕ್ಕೆ ಏರಿಕೆಯಾಗಲಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಟೀಕಿಸಿದ್ದರು. ಗ್ಯಾರಂಟಿ ಜಾರಿಗೆ ತರಲು ಅಸಾಧ್ಯ, ರಾಜ್ಯ ದಿವಾಳಿ ಆಗುತ್ತದೆ. ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ ಎಂದರು. ಆದರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತು. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಲಾಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರತಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ವಿವೇಚನೆಯಡಿ 80 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ. ವಿಪಕ್ಷ, ಆಡಳಿತದ ಶಾಸಕರಿಗೂ ಅನುದಾನ ಹಂಚಿಕೆ ಮಾಡಲಾಗಿದ್ದು ಈ ವರ್ಷ ಪ್ರತಿ ಶಾಸಕರಿಗೂ 25 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ವಿವರಿಸಿದರು.

ರಾಜ್ಯದಿಂದ 4.50 ಲಕ್ಷ ಕೋಟಿ ರೂ. ತೆರಿಗೆ ಹಣ ಪಡೆಯುತ್ತಿರುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡುತ್ತಿರುವುದು ಕೇವಲ 50 ಸಾವಿರ ಕೋಟಿ. ಐವರು ಕೇಂದ್ರ ಸಚಿವರಿದ್ದರೂ ರಾಜ್ಯದ ಹಿತಾಸಕ್ತಿ ಬಗ್ಗೆ ಬಾಯಿಬಿಡುತ್ತಿಲ್ಲ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರು ಕೇಂದ್ರ ಸರ್ಕಾರ ಒಪ್ಪಿಗೆ ಕೊಡುತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ಅವರ ಮೌನ ಏಕೆ ಎಂದು ಪ್ರಶ್ನಿಸಿದರು.

ಈ ಉಪಚುನಾವಣೆ ಫಲಿತಾಂಶ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಈ ಉಪಚುನಾವಣೆ ಗೆಲುವು ಮುಂದಿನ ಚುನಾವಣೆ ದಿಕ್ಸೂಚಿ ಎಂಬುದು ಅವರ ವೈಯಕ್ತಿಕ ಅಭಿಪ್ರಾಯ, ರಾಜಕೀಯ ವಿಶ್ಲೇಷಣೆ. ಈ ಹಿಂದೆ ನಡೆದ ಬಳ್ಳಾರಿ, ಚನ್ನಪಟ್ಟಣ, ಹಾವೇರಿ ಉಪಚುನಾವಣೆಯಲ್ಲಿ ಮೂರರಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚನ್ನಪಟ್ಟಣ ಮತ್ತು ಹಾವೇರಿ ಕ್ಷೇತ್ರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರ ಪುತ್ರರನ್ನೇ ಸೋಲಿಸಿ ಕಾಂಗ್ರೆಸ್ ಗೆಲುವು ಸಾದಿಸಿತ್ತು ಎಂದು ಹೇಳಿದರು.

ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ 50 ಸ್ಥಾನ ದಾಟುತ್ತಿಲ್ಲ. ಅವರಿಗೆ ಬೇರೆ ಪಕ್ಷದ ಅನಿವಾರ್ಯತೆ ಇದೆ. ಜೆಡಿಎಸ್ ಮೈತ್ರಿ ವರ್ಕ್ ಔಟ್ ಆಗುವುದಿಲ್ಲ, ದಾವಣಗೆರೆಯಲ್ಲಿ ಜೆಡಿಎಸ್ ಪ್ರಭಾವ ಇಲ್ಲ. ಅಶೋಕ್, ವಿಜಯೇಂದ್ರ, ಕುಮಾರಸ್ವಾಮಿ ಅವರ ಮಾತಿಗೆ ಬೆಲೆ ಇಲ್ಲ. ಅವರದ್ದು ಹಿಟ್ ಅಂಡ್ ರನ್ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ರವಿಕುಮಾರ್ ಗಣಿಗ, ಬಸವರಾಜ್ ಶಿವಗಂಗಾ, ಹರೀಶ್ ಗೌಡ, ಎ.ಸಿ.ಶ್ರೀನಿವಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ