ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಮತ ಪ್ರಚಾರ ನಡೆಸಿದ ಶಾಸಕ ಎಂ. ಚಂದ್ರಪ್ಪ ಅವರು, ಈ ಬಾರಿ ಕ್ಷೇತ್ರದಲ್ಲಿ ನಮ್ಮ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಮತಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ
ಮತದಾರರನ್ನು ಉದ್ದೇಶಿಸಿ ಮತಯಾಚನೆ ನಡೆಸಿದ ಅವರು, ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರ ಆಶೋತ್ತರಗಳಿಗೆ ಧ್ವನಿಯಾಗುವ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಚುನಾವಣೆಯಲ್ಲಿ ಮತದಾರರ ಬೆಂಬಲ ನಮ್ಮ ಪರವಾಗಿದ್ದು, ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯೂರು ಉಪಚುನಾವಣೆಯ ಕುರಿತು ಮಾತನಾಡಿದ ಶಾಸಕ ಎಂ. ಚಂದ್ರಪ್ಪ ಅವರು, ಜನರು ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದ್ದು, ಮುಂಬರುವ ಉಪಚುನಾವಣೆಯಲ್ಲಿ ತಮ್ಮ ಮತದಾನದ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಮಾತು ಮುಂದುವರಿಸಿ ಹಿರಿಯೂರಿನಲ್ಲಿ ಬಿಜೆಪಿ ಅಧ್ಯಕ್ಷರಾದ ಅಭಿನಂದನ್ ಅವರು ಉತ್ತಮ ಸಂಘಟನೆ ಮಾಡುತ್ತಿದ್ದು ಹಾಗೂ ಮತದಾರರ ಒಲವು ನಮ್ಮ ಪರವಾಗಿದ್ದು, ಜನರ ಬೆಂಬಲದೊಂದಿಗೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ ಎಂಬ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಅಭಿನಂದನ್ ಹಾಗೂ ಜೆಡಿಎಸ್ ಅಧ್ಯಕ್ಷರಾದ ಶಂಕರ್ ಮೂರ್ತಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆಟಿ. ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಮಂಜುನಾಥ್,ಬಿಜೆಪಿ ವಿಭಾಗ ಸಹಾ ಪ್ರಭಾರಿ ಎ ಮುರಳಿ, ಬಿಜೆಪಿ ಜೆಡಿಎಸ್ ಮುಖಂಡರಾದ ಯಶೋಧರ್, ಜಯಣ್ಣ ರವೀಂದ್ರಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮಾಧುರಿ ಗಿರೀಶ್, ಶ್ರೀ ವೆಂಕಟೇಶ್ ಯಾದವ್, ಎನ್‌ಡಿಎ ಮುಖಂಡರಾದ ಜೆ.ಬಿ. ರಾಜು, ನಾಗರಾಜ್,ತಮ್ಮಣ್ಣ ದಿವಾಕರ್, ರಮೇಶ್, ಹನುಮಂತರಾಯಪ್ಪ, ನಿತಿನ್ ಗೌಡ, ದೇವರಾಜ್, ಯಶವಂತ್, ಪರಮೇಶ್, ಮಹೇಶ್, ಬಸವರಾಜ್, ಮುರಳಿಧರ್, ಸಿ.ಕೆ.ಟಿ. ಹನುಮಂತ, ಪ್ರಜ್ವಲ್, ತಿಪ್ಪೇಸ್ವಾಮಿ, ಲೋಕಣ್ಣ, ಸೋಮಣ್ಣ, ರಂಗಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪದವೀಧರ ಮತದಾರರು ಉಪಸ್ಥಿತರಿದ್ದರು.
ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಒಗ್ಗಟ್ಟು ಮತ್ತು ಕೆ.ಎಂ. ಸುರೇಶ್ ಅವರ ಗೆಲುವಿಗೆ ಸಂಘಟಿತವಾಗಿ ಶ್ರಮಿಸುವ ಸಂಕಲ್ಪವನ್ನು ಮುಖಂಡರು ವ್ಯಕ್ತಪಡಿಸಿದರು.



