Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಪತಿ ತರಲು ಹೊರಟ ಯುವಕರು ಅಪಘಾತದಲ್ಲಿ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು ಕಂಡ ಘಟನೆ ವರದಿಯಾಗಿದೆ.

ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಘಟನೆ ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. 

ಲಿಂಗದಹಳ್ಳಿ ಗ್ರಾಮದ 9 ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಇದರಲ್ಲಿದ್ದ ಉಳಿದ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ತೀವ್ರವಾದ ರಕ್ತಸ್ರಾವವಾಗಿದೆ.

ಚಾಲಕ ಮನೋಜ್ ಹಾಗೂ ಮತ್ತೋರ್ವನನ್ನು ಮೆಗ್ಗಾನ್ ತುರ್ತುಘಟಕಕ್ಕೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ