Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಮ್ಮ ದೇವಿ ದೇವಾಲಯದಲ್ಲಿ ಕಳ್ಳತನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದ್ದು
, ಒಳನುಗ್ಗಿದ ದುಷ್ಕರ್ಮಿಗಳು ಹುಂಡಿ ಹಾಗೂ ದೇವಿಯ ತಾಳಿ ಆಭರಣವನ್ನು ಕದ್ದೊಯ್ದಿರುವುದು ತಿಳಿದುಬಂದಿದೆ.

ಜನವಸತಿ ಪ್ರದೇಶದಲ್ಲೇ ಇರುವ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಾಹಿತಿ ತಿಳಿದ ಕೂಡಲೇ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಗ್ರಾಮದಲ್ಲಿ ಅಪರಿಚಿತರ ವಲಸೆ ಕಾರ್ಮಿಕರ ಸಂಚಾರ ಹೆಚ್ಚಾಗಿರುವುದು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಹಾವಳಿ ಕಂಡು ಬರುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭದ್ರತೆ ಕುರಿತ ಆತಂಕ ಮತ್ತಷ್ಟು ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ತಾಲ್ಲೂಕಿನಾದ್ಯಾಂತ ದೇವಸ್ಥಾನ ಹುಂಡಿ ಕಳವು ನಿಧಿ ಶೋಧನೆಗಾಗಿ ವಿಗ್ರಹ ಕಳವು ಐತಿಹಾಸಿಕ ಪರಂಪರೆ ಹಿನ್ನೆಲೆಯ ರಾಜ ಹಾಗು ಪಾಳೆಗಾರರ ಆಳ್ವಿಕೆಯ ಕಾಲದ ದೇವಾಲಯಗಳನ್ನು ದ್ವಂಸ ಮಾಡಿರುವ ಘಟನೆಗಳು ಕಂಡು ಬರುತ್ತಿದ್ದು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಹೆಚ್ಚಿಸ ಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಪ್ರಕರಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ